ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಅಮೆರಿಕ: ಬಾಲಕರಿಂದ ಭಾರತೀಯ ವಿಜ್ಞಾನಿ ಮೇಲೆ ಹಲ್ಲೆ (Computer scientist | Washington | Indian scientist | New Jersey)
Bookmark and Share Feedback Print
 
ತಮ್ಮ ಕುಟುಂಬದ ಸದಸ್ಯರೊಂದಿಗೆ ವಿಹಾರಕ್ಕೆ ಹೊರಟಿದ್ದ ಭಾರತೀಯ ಮೂಲದ ಕಂಪ್ಯೂಟರ್ ವಿಜ್ಞಾನಿ ಮೇಲೆ ಮೂರು ಮಂದಿ ಬಾಲಕರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನ್ಯೂಜೆರ್ಸಿ ಪ್ರಾಂತ್ಯದಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

17ರ ಹರೆಯದ ಮೂರು ಮಂದಿ ಬಾಲಕರು ಈ ದುಷ್ಕೃತ್ಯ ಎಸಗಿರುವುದಾಗಿ ತಿಳಿಸಿರುವ ಪೊಲೀಸ್ ಅಧಿಕಾರಿಗಳು, ಮಕ್ಕಳು ಅಪ್ರಾಪ್ತರಾಗಿದ್ದರಿಂದ ಹೆಸರನ್ನು ಬಹಿರಂಗಗೊಳಿಸಿಲ್ಲ. ಇದೀಗ ಹಲ್ಲೆ ನಡೆಸಿರುವ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. 49ರ ಹರೆಯದ ಡಿವ್ಯಾಂದು ಸಿನ್ನಾ ಅವರು ಅಮೆರಿಕದಲ್ಲಿ ಕಂಪ್ಯೂಟರ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಜೂನ್ 25ರಂದು ತಮ್ಮ ಕುಟುಂಬದ ಸದಸ್ಯರೊಂದಿಗೆ ಹೊರಗೆ ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಮೂವರು ಮಕ್ಕಳು ಹಲ್ಲೆ ನಡೆಸಿದ್ದರು. ಈ ಸಂದರ್ಭದಲ್ಲಿ ಅವರ ಇಬ್ಬರ ಮಕ್ಕಳ ಮೇಲೂ ಹಲ್ಲೆ ನಡೆಸಲಾಗಿತ್ತು. ಆದರೆ ಮಕ್ಕಳಿಗೆ ಯಾವುದೇ ಗಂಭೀರ ಗಾಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿನ್ನಾ ಅವರ ಮೇಲೆ ನಡೆದಿರುವುದು ಜನಾಂಗೀಯ ಹಲ್ಲೆ ಅಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಸ್ಥಳೀಯ ಪ್ರಾಸಿಕ್ಯೂಟರ್ ಬ್ರೂಸೆ ಕಾಪ್ಲಾನ್ ವಿವರಿಸಿದ್ದು, ಇದು ಗುಂಪೊಂದು ನಡೆಸಿದ ಹಲ್ಲೆಯಾಗಿದೆ ಎಂದು ಹೇಳಿದ್ದಾರೆ. ಯಾವ ಕಾರಣಕ್ಕಾಗಿ ಹಲ್ಲೆ ನಡೆಸಿದ್ದಾರೆಂಬುದನ್ನು ತನಿಖೆ ಪೂರ್ಣಗೊಂಡ ನಂತರವೇ ಬಹಿರಂಗವಾಗಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ