ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬಾಲ ಕಾರ್ಮಿಕ ಪದ್ಧತಿ ನಿಲ್ಲಿಸಿ: ಬಾಂಗ್ಲಾ ಸರಕಾರಕ್ಕೆ ಕೋರ್ಟ್ (Bangladesh court | child labour | government | high court)
Bookmark and Share Feedback Print
 
ದೇಶಾದ್ಯಂತ ಇರುವ ಹಲವು ಕೈಗಾರಿಕಾ ಕಂಪನಿಗಳಲ್ಲಿ ಬಾಲಕಾರ್ಮಿಕರು ದುಡಿಯುತ್ತಿದ್ದು, ವರ್ಷದೊಳಗೆ ದೇಶದಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಕಡಿವಾಣ ಹಾಕಬೇಕು ಎಂದು ಹೈಕೋರ್ಟ್ ಬಾಂಗ್ಲಾದೇಶ ಸರಕಾರಕ್ಕೆ ನಿರ್ದೇಶನ ನೀಡಿದೆ.

ಉತ್ತರ ರಂಗ್‌ಪುರ್ ಜಿಲ್ಲೆಯಲ್ಲಿನ ತಂಬಾಕು ಫ್ಯಾಕ್ಟರಿಯಲ್ಲಿ ಬಾಲ ಕಾರ್ಮಿಕರನ್ನು ದುಡಿಮೆಗೆ ಬಳಸಿಕೊಳ್ಳುತ್ತಿದ್ದು, ಆ ನಿಟ್ಟಿನಲ್ಲಿ ಬೀಡಿ ಉದ್ಯಮವನ್ನು ನಿಲ್ಲಿಸುವಂತೆ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕೆಂದು ಹಲವು ಮಾನವ ಹಕ್ಕು ಸಂಘಟನೆಗಳು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು.

ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿ ಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಮೊಹಮ್ಮದ್ ಇಮ್ಮಾನ್ ಅಲಿ ಮತ್ತು ಉಬೈದುಲ್ ಹಸನ್, ಸರಕಾರ 2006ರ ಬಾಂಗ್ಲಾದೇಶ್ ಕಾರ್ಮಿಕ ಕಾಯ್ದೆಯನ್ನು ತಿದ್ದುಪಡಿ ಮಾಡುವಂತೆ ಸೂಚಿಸಿದರು.

ಆ ನಿಟ್ಟಿನಲ್ಲಿ ದೇಶದಲ್ಲಿ ಒಂದು ವರ್ಷದೊಳಗೆ ಬಾಲ ಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕಬೇಕು. ಅಷ್ಟೇ ಅಲ್ಲ ಬಾಲ ಕಾರ್ಮಿಕರಿಗೆ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯವಾಗಿ ನೀಡುವ ವ್ಯವಸ್ಥೆಯನ್ನು ಸರಕಾರ ಮಾಡಬೇಕು. ಇದನ್ನು ಸರಕಾರ ಗಮನಿಸುವುದಾಗಿಯೂ ಕೋರ್ಟ್ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ