ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಅಮೆರಿಕ-ವೇಶ್ಯಾವಾಟಿಕೆ ಜಾಲ; 69 ಬಾಲಕಿಯರ ರಕ್ಷಣೆ (US | child prostitution racket | FBI | Jason Pack | sexually exploiting)
Bookmark and Share Feedback Print
 
ಅಮೆರಿಕದ ಬಾಲ್ಯ ವೇಶ್ಯಾವಾಟಿಕೆ ನಿಗ್ರಹ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 99 ಮಂದಿಯನ್ನು ಬಂಧಿಸಲಾಗಿದ್ದು, 69 ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಲಾಗಿದೆ ಎಂದು ಮಾಧ್ಯಮದ ವರದಿಯೊಂದು ತಿಳಿಸಿದೆ.

ದೇಶದ 30 ರಾಜ್ಯಗಳ 40 ನಗರಗಳಲ್ಲಿ ಫೆಡರಲ್ ಬ್ಯುರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ) ಅಧಿಕಾರಿಗಳು ಏಕಕಾಲದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಬಾಲ್ಯ ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿದ್ದ 99 ಮಂದಿಯನ್ನು ಸೆರೆ ಹಿಡಿದಿರುವುದಾಗಿ ಪ್ರೆನ್ಸಾ ಲಾಟಿನಾ ವರದಿ ಮಾಡಿದೆ.

ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ಬಳಸಿಕೊಂಡು ಲೈಂಗಿಕ ದಂಧೆಯನ್ನು ನಡೆಸುತ್ತಿದ್ದ ಖದೀಮರನ್ನು ಬಂಧಿಸಲಾಗಿದ್ದು, ಅಂತಹ ಚಟುವಟಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಎಫ್‌ಬಿಐ ವಕ್ತಾರ ಜಾನ್ಸನ್ ಪ್ಯಾಕ್ ತಿಳಿಸಿದ್ದಾರೆ.

ಬಾಲ್ಯ ವೇಶ್ಯಾವಾಟಿಕೆ ಜಾಲದಿಂದ ರಕ್ಷಿಸಲ್ಪಟ್ಟ ಮಕ್ಕಳು 12ರಿಂದ 17 ವರ್ಷದವರಾಗಿದ್ದಾರೆ. ಆದರೆ ಕಾರ್ಯಾಚರಣೆಯಲ್ಲಿ ಎಷ್ಟು ಮಂದಿಯನ್ನು ರಕ್ಷಿಸಲಾಗಿದೆ, ಸೆರೆಹಿಡಿಯಲಾಗಿದೆ ಎಂಬ ಬಗ್ಗೆ ನಿಖರ ಮಾಹಿತಿಯನ್ನು ಅಧಿಕಾರಿಗಳು ನೀಡಿಲ್ಲ ಎಂದು ವರದಿ ಹೇಳಿದೆ.
ಸಂಬಂಧಿತ ಮಾಹಿತಿ ಹುಡುಕಿ