ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಮಧ್ಯಂತರ ಚುನಾವಣೆ ಬೇಡ, ಪಿಪಿಪಿಗೆ ಬೆಂಬಲ: ನವಾಜ್ (Pakistan | PML-N | Nawaz Sharif | PPP | agenda)
Bookmark and Share Feedback Print
 
ದೇಶದಲ್ಲಿ ಮಧ್ಯಂತರ ಚುನಾವಣೆ ನಡೆಯಬೇಕೆಂಬ ಇಚ್ಛೆ ಇಲ್ಲ, ಹಾಗಾಗಿ ಆಡಳಿತಾರೂಢ ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಮೈತ್ರಿಕೂಟದ ಸರಕಾರ ಪೂರ್ಣಾವಧಿ ಮುಗಿಸಬೇಕು ಎಂದು ಪಾಕಿಸ್ತಾನ್ ಮುಸ್ಲಿಮ್ ಲೀಗ್ ನವಾಜ್(ಪಿಎಂಎಲ್-ಎನ್) ಅಧ್ಯಕ್ಷ, ಮಾಜಿ ಪ್ರಧಾನಿ ನವಾಜ್ ಶರೀಫ್ ತಿಳಿಸಿದ್ದಾರೆ.

ಯಾವುದೇ ಕಾರಣಕ್ಕೂ ಪಿಪಿಪಿ ಸರಕಾರವನ್ನು ಬೀಳಿಸುವ ಕುತಂತ್ರಕ್ಕೆ ಇಳಿಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದು, ಆ ನಿಟ್ಟಿನಲ್ಲಿ ತಮ್ಮ ಹತ್ತು ಅಂಶಗಳ ಅಜೆಂಡಾವನ್ನು ಅನುಷ್ಠಾನಗೊಳಿಸಲು ಅನುಕೂಲ ಕಲ್ಪಿಸುವ ನೆಲೆಯಲ್ಲಿ ಪಿಪಿಪಿಗೆ ತಮ್ಮ ಬೆಂಬಲವನ್ನು ಮುಂದುವರಿಸುವುದಾಗಿ ವಿವರಿಸಿದ್ದಾರೆ.

ಪಿಎಂಎಲ್-ಎನ್‌ನ ಅಜೆಂಡಾ ಅಭಿವೃದ್ಧಿ ಪರವಾಗಿದೆ. ಅಷ್ಟೇ ಅಲ್ಲ ದೇಶದ ಏಳಿಗೆಗೆ ಪೂರಕವಾಗಿರುವುದಾಗಿ ಪ್ರಧಾನಿ ಯೂಸೂಫ್ ರಾಜಾ ಗಿಲಾನಿ ಅವರು ನವಾಜ್ ಅವರಿಗೆ ದೂರವಾಣಿ ಕರೆ ಮೂಲಕ ತಿಳಿಸಿ ಶ್ಲಾಘಿಸಿರುವುದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ್ದಾರೆಂದು ಡೈಲಿ ಟೈಮ್ಸ್ ವರದಿ ಮಾಡಿದೆ.
ಸಂಬಂಧಿತ ಮಾಹಿತಿ ಹುಡುಕಿ