ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬಾಂಗ್ಲಾ ಮೇಯರ್ ಚುನಾವಣೆ;ಅಖಾಡದಲ್ಲಿ ಕೊಲೆ ಆರೋಪಿಗಳು! (B'desh polls | murder charges | municipal polls | mayoral candidates)
Bookmark and Share Feedback Print
 
ಬಾಂಗ್ಲಾದಲ್ಲಿ ನಡೆಯುತ್ತಿರುವ ಜಿದ್ದಾಜಿದ್ದಿನ ಮುನ್ಸಿಪಲ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 1,183 ಮೇಯರ್ ಅಭ್ಯರ್ಥಿಗಳಲ್ಲಿ 91 ಮಂದಿ ಕೊಲೆ ಆರೋಪ ಎದುರಿಸುತ್ತಿದ್ದಾರೆ ಎಂದು ಮಾಧ್ಯಮದ ವರದಿಯೊಂದು ತಿಳಿಸಿದೆ.

ದೇಶಾದ್ಯಂತ ಬುಧವಾರದಿಂದ ಒಂದು ವಾರಗಳ ಕಾಲ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬಿಗಿ ಬಂದೋಬಸ್ತ್‌ನಲ್ಲಿ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಷ್ಟೇ ಅಲ್ಲ 522 ಮೇಯರ್ ಅಭ್ಯರ್ಥಿಗಳು ವಿವಿಧ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಅತಿ ಹೆಚ್ಚು ಪ್ರಸಾರ ಹೊಂದಿರುವ ಪ್ರೊಥೋಮ್ ಅಲೋ ಪತ್ರಿಕೆ ವರದಿ ಮಾಡಿದೆ.

ಹಲವು ಅಭ್ಯರ್ಥಿಗಳ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆ ಹೈಕೋರ್ಟ್‌ನಲ್ಲಿ ಬಾಕಿ ಇದೆ. ಇದರಲ್ಲಿ ಬಿಎನ್‌ಪಿ ಆಡಳಿತಾವಧಿಯಲ್ಲಿ ರಾಜಕೀಯ ಹಠಕ್ಕಾಗಿ ತಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಆರೋಪ ಹೊರಿಸಿದ್ದಾರೆಂಬ ಹಿನ್ನೆಲೆಯಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಅವಾಮಿ ಲೀಗ್ ಸರಕಾರ ಹಲವರ ಮೊಕದ್ದಮೆಗಳನ್ನು ವಾಪಸ್ ಪಡೆದಿತ್ತು.
ಸಂಬಂಧಿತ ಮಾಹಿತಿ ಹುಡುಕಿ