ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಲಿಬಿಯಾ ಸರಕಾರದಿಂದ ದಮನಕಾರಿ ಪ್ರವೃತ್ತಿ:ಒಬಾಮಾ (Barack Obama | Libya | Bloodshed | Muammar Gaddafi)
PTI
ಲಿಬಿಯಾ ದೇಶದಲ್ಲಿ ಪ್ರತಿಭಟನಾಕಾರರ ವಿರುದ್ಧ ಸರಕಾರ ದಮನ ಪ್ರವೃತ್ತಿಯನ್ನು ಅನುಸರಿಸುತ್ತಿರುವುದನ್ನು ವಿರೋಧಿಸುವಂತೆ ವಿಶ್ವಕ್ಕೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಕರೆ ನೀಡಿದ್ದಾರೆ.

ರಾಷ್ಟ್ರವನ್ನು ಉದ್ದೇಶಿಸಿ ಮೊದಲ ಬಾರಿಗೆ ಟೆಲಿವಿಜನ್ ಸಂದರ್ಶನದಲ್ಲಿ ಮಾತನಾಡಿದ ಗಡ್ಡಾಫಿ, ಪ್ರತಿಭಟನಾಕಾರರನ್ನು ನಿರ್ದಯಿಯಾಗಿ ಹತ್ಯೆ ಮಾಡುವಂತೆ ಆದೇಶ ನೀಡಿರುವುದು ಅಮೆರಿಕ ಸರಕಾರವನ್ನು ಕೆರಳಿಸಿದೆ.

ಲಿಬಿಯಾದಲ್ಲಿ ರಕ್ತಪಾತವನ್ನು ತಡೆಯುವ ನಿಟ್ಟಿನಲ್ಲಿ ಅಮೆರಿಕ ಮೈತ್ರಿಕೂಟ ದೇಶಗಳು, ಸಂಪೂರ್ಣವಾಗಿ ಶ್ರಮಿಸಬೇಕು ಎಂದು ಮನವಿ ಮಾಡಿದ್ದಾರೆ.

ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಮಾತನಾಡಿ, ಲಬಿಯಾ ವಿರುದ್ಧ ದಿಗ್ಬಂಧನಗಳನ್ನು ಹೇರುವಂತೆ ಸರಕಾರದ ಮೇಲೆ ರಾಜಕೀಯ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಲಿಬಿಯಾದಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಸೇನಾಪಡೆಗಳು ಗುಂಡಿನ ದಾಳಿ ನಡೆಸಿ, ಕನಿಷ್ಠ 1000 ಜನರನ್ನು ಹತ್ಯೆ ಮಾಡಿದ್ದಾರೆ. ಅಮೆರಿಕದ ರಾಯಭಾರಿಗಳು ಹಾಗೂ ನಾಗರಿಕರು ಆತಂಕದ ಕ್ಷಣಗಳನ್ನು ಎದುರಿಸುತ್ತಿದ್ದಾರೆ ಎಂದು ಲಿಬಿಯಾದ ಮಾಜಿ ಸಚಿವರು ಆತಂಕ ವ್ಯಕ್ತಪಡಿಸಿದ್ದಾರೆ.

ಲಿಬಿಯಾದಲ್ಲಿ ನಡೆಯುತ್ತಿರುವ ಸರಕಾರದ ದಮನಕಾರಿಯ ನೀತಿಯನ್ನು ವಿಶ್ವ ಸಮುದಾಯ ಸಹಿಸುವುದಿಲ್ಲ ಎಂದು ಒಬಾಮಾ ಸ್ಪಷ್ಟಪಡಿಸಿದ್ದಾರೆ.

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರ ಮೇಲೆ ಗುಂಡಿನ ಸುರಿಮಳೆಗೈದಿರುವುದು, ಜೀವ ಬೆದರಿಕೆಯೊಡ್ಡುವುದು ಅಂತಾರಾಷ್ಟ್ರೀಯ ನೀತಿಗಳನ್ನು ಉಲ್ಲಂಘಿಸಿದಂತಾಗಿದೆ. ಆದ್ದರಿಂದ ಕೂಡಲೇ ಹಿಂಸಾಚಾರವನ್ನು ನಿಲ್ಲಿಸಬೇಕು ಎಂದು ಒಬಾಮಾ ಎಚ್ಚರಿಸಿದ್ದಾರೆ.
ಇವನ್ನೂ ಓದಿ