ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಸಿಡ್ನಿ: ಭಾರತೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ (Australia | Indian student | raped | murdered | police)
ಭಾರತೀಯ ಮೂಲದ 24ರ ಹರೆಯದ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಹತ್ಯೆಗೈದ ನಂತರ ಆಕೆಯ ಮೃತದೇಹವನ್ನು ಸೂಟ್‌ಕೇಸ್‌ನೊಳಗೆ ಹಾಕಿಟ್ಟಿರುವ ಘಟನೆ ಕಳೆದವಾರ ಸಿಡ್ನಿಯಲ್ಲಿ ನಡೆದಿದೆ.

ಇಲ್ಲಿ ಮೆಡೌ‌ಬ್ಯಾಂಕ್ ಪಾರ್ಕ್ ಸಮೀಪದ ಕಾಲುವೆಯೊಂದರಲ್ಲಿ ಸೂಟ್‌ಕೇಸ್‌ವೊಂದನ್ನು ಕಟ್ಟಡ ನಿರ್ಮಾಣ ಕಾರ್ಮಿಕರು ಮಾರ್ಚ್ 11ರಂದು ಗಮನಿಸಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಿದಾಗ ಅದರೊಳಗೆ ಶವ ಇರುವುದು ಪತ್ತೆಯಾಗಿರುವುದಾಗಿ ಸ್ಥಳೀಯ ಪೊಲೀಸರು ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೃತಳನ್ನು ಭಾರತೀಯ ಮೂಲದ ವಿದ್ಯಾರ್ಥಿನಿ ಟೋಶಾ ಥಾಕ್ಕಾರ್ (24) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯನ್ನು ಯಾವ ರೀತಿಯಲ್ಲಿ ಕೊಲೆಗೈಯಲಾಯಿತು ಎಂಬ ಬಗ್ಗೆ ತಿಳಿಯುವ ನಿಟ್ಟಿನಲ್ಲಿ ಪೋಸ್ಟ್ ಮಾರ್ಟಮ್ ವರದಿಗಾಗಿ ಕಾಯುತ್ತಿರುವುದಾಗಿ ಪೊಲೀಸರು ವಿವರಿಸಿದ್ದಾರೆ.

ಸಿಡ್ನಿ ಕಾಲೇಜ್ ಆಫ್ ಬ್ಯುಸಿನೆಸ್ ಆಂಡ್ ಐಟಿಯಲ್ಲಿ ಥಾಕ್ಕಾರ್ ವಿದ್ಯಾಭ್ಯಾಸ ಮಾಡುತ್ತಿದ್ದು,ಈಕೆ ಆಸ್ಟ್ರೇಲಿಯಾದ ಖಾಯಂ ನಿವಾಸಿಯಾಗಿರುವುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ. ಏತನ್ಮಧ್ಯೆ ಆಕೆಯನ್ನು ಯಾವ ಕಾರಣಕ್ಕಾಗಿ ಕೊಂದಿದ್ದಾರೆ ಎಂಬುದು ನಮಗೆ ತಿಳಿಯುತ್ತಿಲ್ಲ ಎಂದು ಥಾಕ್ಕಾರ್ ಕುಟುಂಬಿಕರು ಮತ್ತು ಗೆಳೆಯರು ತಿಳಿಸಿದ್ದಾರೆ.
ಇವನ್ನೂ ಓದಿ