ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬ್ರೆಜಿಲ್ ಶಾಲೆಯಲ್ಲಿ ಗುಂಡಿನ ದಾಳಿ; 13 ಬಲಿ (Brazil | school | 13 dead | opens fire | elementary school | Evandro Bezerra)
ರಿಯೋ ಡೇ ಜನೇರಿಯೊದಲ್ಲಿನ ಪ್ರಾಥಮಿಕ ಶಾಲೆಯೊಂದರಲ್ಲಿ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ಸುರಿಮಳೆಗೆರೆದ ಪರಿಣಾಮ ಸುಮಾರು 13 ಜನರು ಸಾವನ್ನಪ್ಪಿರುವ ಘಟನೆ ನಡೆದಿರುವುದಾಗಿ ಬ್ರೆಜಿಲ್ ಅಧಿಕಾರಿಗಳು ತಿಳಿಸಿದ್ದಾರೆ.

ಏತನ್ಮಧ್ಯೆ ಗುಂಡಿನ ದಾಳಿ ನಡೆಸಿದ ವ್ಯಕ್ತಿ ನಂತರ ಸ್ವತಃ ತಾನೇ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಪೊಲೀಸರು ಗುಂಡಿಕ್ಕಿ ಹತ್ಯೆಗೈದಿದ್ದಾರೆಂಬ ಬಗ್ಗೆ ಖಚಿತವಾಗಿಲ್ಲ ಎಂದು ಹೇಳಿದ್ದಾರೆ.

ಗುರುವಾರ ನಡೆದ ಈ ಘಟನೆಯಲ್ಲಿ ಸುಮಾರು 20 ಮಂದಿ ಗಾಯಗೊಂಡಿರುವುದಾಗಿ ಅಗ್ನಿಶಾಮಕ ಇಲಾಖೆಯ ವಕ್ತಾರ ಎವಾನಾಡ್ರೊ ಬೆಜೆರ್ರಾ ಗ್ಲೋಬೋ ಟೆಲಿವಿಷನ್‌ಗೆ ವಿವರಿಸಿದ್ದಾರೆ. ಗುಂಡಿನ ದಾಳಿ ನಡೆಸಿದ ವ್ಯಕ್ತಿ ಸಾವನ್ನಪ್ಪಿರುವುದನ್ನು ಅವರು ಖಚಿತಪಡಿಸಿದ್ದಾರೆ.

ಆದರೆ ಘಟನೆಯಲ್ಲಿ ಸಾವನ್ನಪ್ಪಿದವರು ಎಷ್ಟು ಮಂದಿ ಎಂಬುದು ನಿಖರವಾಗಿ ತಿಳಿದಿಲ್ಲ ಎಂದಿದ್ದಾರೆ. ಅಲ್ಲದೇ ತಾನು ಆ ವಿಷಯದ ಬಗ್ಗೆ ಮಾತನಾಡಲು ಅಧಿಕೃತ ವ್ಯಕ್ತಿಯಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಇವನ್ನೂ ಓದಿ