ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಭಾರತೀಯ ವಿದ್ಯಾರ್ಥಿಗಳ ವಿರುದ್ಧ ಉಪನ್ಯಾಸಕರ ಗೂಢಚಾರಿಕೆ? (UK | British universiti | Non-EU students | David Cameron)
ಬ್ರಿಟಿಷ್‌ ವಿಶ್ವ ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುವ ಭಾರತ ಮತ್ತು ಯೂರೋಪೇತರ ರಾಷ್ಟ್ರಗಳ ವಿದ್ಯಾರ್ಥಿಗಳ ಮೇಲೆ ಒಂದು ಕಣ್ಣಿಡುವಂತೆ ಬ್ರಿಟನ್‌ ಗೃಹ ಇಲಾಖೆಯು ವಿಶ್ವ ವಿದ್ಯಾಲಯಗಳ ಪ್ರಾಧ್ಯಾಪಕರಿಗೆ ಸೂಚನೆ ನೀಡಿದ್ದು, ಪಾಠ ಮಾಡುವುದರೊಂದಿಗೆ ವಿದ್ಯಾರ್ಥಿಗಳ ಮೇಲೆ ಒಂದು ನಿಗಾ ಇಡುವುದು ವಿವಿ ಲೆಕ್ಚರ್‌ಗಳ ಹೊಸ ಜವಾಬ್ದಾರಿಯಾಗಿದೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಯೂರೋಪೇತರ ರಾಷ್ಟ್ರಗಳಿಂದ ಕಳೆದ 18 ತಿಂಗಳಿನಲ್ಲಿ ಯುಕೆ ಬಾರ್ಡರ್‌ ಏಜೆನ್ಸಿ ಮೂಲಕ 27,121ವಿದ್ಯಾರ್ಥಿಗಳು ವಿಶ್ವ ವಿದ್ಯಾಲಯಗಳಿಗೆ ದಾಖಲಾಗಿದ್ದಾರೆ ಎಂದು ಸರಕಾರ ಅಂಕಿ ಅಂಶಗಳನ್ನು ನೀಡಿದೆ.

ವಿದೇಶಗಳಿಂದ ಬ್ರಿಟನ್‌ಗೆ ಆಗಮಿಸುವ ವಿದ್ಯಾರ್ಥಿಗಳ ವೀಸಾ ನೀತಿಯನ್ನು ಬಿಗಿಗೊಳಿಸಲಾಗಿದ್ದು, ವಿದ್ಯಾರ್ಥಿಗಳು ವೀಸಾ ದುರುಪಯೋಗ ಮಾಡಿಕೊಳ್ಳುವುದನ್ನು ತಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತರಗತಿಗಳಿಗೆ ಗೈರು ಹಾಜರಾದರೆ ಅಥವಾ ಅನುಮಾನಾಸ್ಪದವಾಗಿ ವರ್ತಿಸುವುದು ಕಂಡುಬಂದರೆ ಕೂಡಲೇ ವಲಸೆ ಅಧಿಕಾರಿಗಳಿಗೆ ಮಾಹಿತಿ ನೀಡಲು ಕೋರಲಾಗಿದೆ.

ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸುವಂತೆ ಸರಕಾರ ಆದೇಶ ನಿಡಿರುವುದು ಸಿಬ್ಬಂದಿಯ ಮೇಲೆ ಹೆಚ್ಚಿನ ಒತ್ತಡ ಬಂದಿದೆ ಅಲ್ಲದೇ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಸಂಬಂಧದ ಮೇಲೂ ಇದು ಮಾರಕ ಪರಿಣಾಮ ಬೀರುತ್ತಿದೆ ಎಂದು ವಿಶ್ವವಿದ್ಯಾಲಯಗಳು ಹಾಗೂ ಕಾಲೇಜು ಒಕ್ಕೂಟ ತಿಳಿಸಿದೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬ್ರಿಟನ್, ಬ್ರಿಟಿಷ್ ವಿಶ್ವವಿದ್ಯಾಲಯಗಳು, ಯೂರೋಪೇತರ ವಿದ್ಯಾರ್ಥಿಗಳು, ಡೇವಿಡ್ ಕ್ಯಾಮರೂನ್, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ಫಾರಿನ್ ಸುದ್ದಿ, ಅಂತಾರಾಷ್ಟ್ರೀಯ, ಅಂತರರಾಷ್ಟ್ರೀಯ, ಅಂತರ್ರಾಷ್ಟ್ರೀಯ ಸುದ್ದಿ