ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಮಾಜಿ ಕೇಂದ್ರ ಸಚಿವ ಅಜಿತ್ ಪಾಂಜ ಇನ್ನಿಲ್ಲ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮಾಜಿ ಕೇಂದ್ರ ಸಚಿವ ಅಜಿತ್ ಪಾಂಜ ಇನ್ನಿಲ್ಲ
ಮಾಜಿ ಕೇಂದ್ರಸಚಿವ ಹಾಗೂ ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಅಜಿತ್ ಪಾಂಜ ಅವರು ಇಲ್ಲಿನ ಖಾಸಗೀ ಆಸ್ಪತ್ರೆಯೊಂದರಲ್ಲಿ ಶುಕ್ರವಾರ ಮಂಜಾನೆ ವಿಧಿವಶರಾಗಿದ್ದಾರೆ.

ಪುತ್ರ ಹಾಗೂ ಪುತ್ರಿಯನ್ನು ಅಗಲಿರುವ ಪಾಂಜಾ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅವರಿಗೆ 72 ವರ್ಷ ವಯಸ್ಸಾಗಿತ್ತು. ಅಕ್ಟೋಬರ್ 26ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶುಕ್ರವಾರ ಮುಂಜಾನೆ 4.30ರ ವೇಳೆಗೆ ಅವರು ಸಾವನ್ನಪ್ಪಿದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ರಾಜೀವ್ ಗಾಂಧಿ, ಪಿ.ವಿ.ನರಸಿಂಹರಾವ್, ಅಟಲ್ ಬಿಹಾರಿ ವಾಜಪೇಯಿ ಅವರುಗಳ ಸರಕಾರದಲ್ಲಿ ಪ್ರಮುಖ ಖಾತೆಗಳನ್ನು ಹೊಂದಿದ್ದ ಪಾಂಜ ಆರುಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

ಇದಕ್ಕೂ ಮುಂಚಿತವಾಗಿ ಅಂದರೆ 1971 ಮತ್ತು 1972-77ರ ಅವಧಿಯಲ್ಲಿ ಅವರು ಪಶ್ಚಿಮಬಂಗಾಳ ಸರ್ಕಾರದಲ್ಲಿ ಸಚಿವರಾಗಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಅವಮಾನ ಸಾವಿಗಿಂತಲೂ ಮಿಗಿಲು: ಸು.ಕೋ
ನೋಯ್ಡದಲ್ಲಿ ಲಘು ಸ್ಫೋಟ: ಮಕ್ಕಳಿಬ್ಬರಿಗೆ ಗಾಯ
ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಮಕ್ವಾನ
ಈ ಸ್ವಾಮಿ ವೇಷ ಮರೆಸುವಲ್ಲಿ ನಿಸ್ಸೀಮ: ಎಟಿಎಸ್
ಛತ್ತೀಸ್‌ಗಢ: ನಕ್ಸಲ್‌‌ರಿಂದ ಮತಯಂತ್ರ ಅಪಹರಣ
ಇಂದು ರಾತ್ರಿ 8.30ಕ್ಕೆ ಚಂದ್ರನ ಮೇಲಿಳಿಯಲಿರುವ ತ್ರಿವರ್ಣ