ಮುಂಬೈ ಭಯೋತ್ಪಾದನಾ ದಾಳಿಗೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ನೆರೆಯ ಪಾಕಿಸ್ತಾನದ ಮೇಲೆ ಮಿಲಿಟರಿ ಕಾರ್ಯಾಚರಣೆ ಕೈಗೊಳ್ಳುವ ಪ್ರಶ್ನೆಯೇ ಇಲ್ಲ ಎಂದು ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ಅವರು, 26/11ರ ದಾಳಿ ಕುರಿತಂತೆ ಪಾಕ್ ಮೇಲೆ ಮಿಲಿಟರಿ ಕಾರ್ಯಾಚರಣೆ ನಡೆಸುವುದಿಲ್ಲ ಎಂದಿರುವ ಅವರು, ಈಗಾಗಲೇ ಹಲವಾರು ರಾಜಕೀಯ ಪಕ್ಷಗಳು ಕೂಡ ಮಿಲಿಟರಿ ಕಾರ್ಯಾಚರಣೆ ನಡೆಸುವಂತೆ ಸಲಹೆ ನೀಡಿರುವುದಾಗಿಯೂ ಈ ಸಂದರ್ಭದಲ್ಲಿ ತಿಳಿಸಿದರು.
ಪಾಕ್ ಮೇಲೆ ಮಿಲಿಟರಿ ಕಾರ್ಯಾಚರಣೆ ನಡೆಸುವುದನ್ನು ಸರ್ಕಾರ ಸೇರಿದಂತೆ ಜಗತ್ತಿನ ಹಲವಾರು ದೇಶಗಳು ವಿರೋಧಿಸುವುದಾಗಿ ಹೇಳಿದ ಅವರು, ಇತ್ತೀಚೆಗೆ ಇಸ್ರೇಲ್ ಕೂಡ ಗಾಜಾಪಟ್ಟಿ ಮೇಲೆ ದಾಳಿ ನಡೆಸುವ ಮೂಲಕ ವ್ಯಾಪಕ ಟೀಕೆಗೆ ಒಳಗಾಗಿತ್ತು ಎಂಬುದಾಗಿ ಉದಾಹರಿಸಿದರು.
ಅಲ್ಲದೇ ಭಾರತ ಮಾನವ ಹಕ್ಕುಗಳಿಗೆ ಹೆಚ್ಚಿನ ಬೆಲೆ ನೀಡುತ್ತದೆ ಎಂದು ಮುಖರ್ಜಿ, ಯಾವುದೇ ಕಾರಣಕ್ಕೂ ಮಿಲಿಟರಿ ಕಾರ್ಯಾಚರಣೆ ನಡೆಸುವ ಯೋಚನೆ ಭಾರತಕ್ಕಿಲ್ಲ ಎಂದರು. ಆದರೆ ಪಾಕ್ ನೆಲದಲ್ಲಿರುವ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವಂತೆ ಒತ್ತಡ ಹೇರುವುದಾಗಿ ತಿಳಿಸಿದರು. |