ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಭಾರಿ ಮಳೆಯಿಂದಾಗಿ ಭೂಕುಸಿತ: 12 ಮಂದಿ ಸಾವು (Andheri | Mumbai | landslides | Amitabh Gupta | Sakinaka | LBS nagar)
 
ನಗರದ ಅಂಧೇರಿ ವ್ಯಾಪ್ತಿ ಪ್ರದೇಶದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಮನೆಗಳು ಕುಸಿದ ಪರಿಣಾಮವಾಗಿ ಮಕ್ಕಳು ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ರಾತ್ರಿ ಸಕಿನಾಕಾದಲ್ಲಿರುವ ಎಲ್‌ಬಿಎಸ್‌ ನಗರ ಬಡಾವಣೆಯಲ್ಲಿ 15 ರಿಂದ 20 ಮನೆಗಳು ವರುಣನ ಅಕ್ರೋಶಕ್ಕೆ ಕುಸಿತಗೊಂಡಿವೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಅಮಿತಾಬ್ ಗುಪ್ತಾ ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ 10 ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಕುಸಿದ ಮನೆಗಳ ಅಡಿಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಗುಪ್ತಾ ಹೇಳಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ್ ಚವ್ಹಾಣ್ ,ಭೂಕುಸಿತದಲ್ಲಿ ಬಲಿಯಾದವರ ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿ ಪರಿಹಾರ ಹಾಗೂ ಘಟನೆಯಲ್ಲಿ ಗಾಯಗೊಂಡವರಿಗೆ 20 ಸಾವಿರದಿಂದ 50 ಸಾವಿರ ರೂಪಾಯಿಗಳವರೆಗೆ ಧನವನ್ನು ಘೋಷಿಸಿದ್ದಾರೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ