ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಕ್ರಮ ಆರೋಪ: ನ್ಯಾ.ದಿನಕರನ್ ವಾಗ್ದಂಡನೆಗೆ ವಿಪಕ್ಷ ಚಿಂತನೆ (Dinakara | High court | Supreme court | Karnataka | Tamil nadu)
Bookmark and Share Feedback Print
 
ಅಕ್ರಮ ಆಸ್ತಿ ಸಂಪಾದನೆ ಆರೋಪ ಎದುರಿಸುತ್ತಿರುವ ಕರ್ನಾಟಕ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪಿ.ಡಿ.ದಿನಕರನ್ ಅವರನ್ನು ವಾಗ್ದಂಡನೆಗೆ ಗುರಿಪಡಿಸಬೇಕು ಎಂಬ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ, ಇದೀಗ ರಾಜ್ಯಸಭೆ ವಿಪಕ್ಷ ಸದಸ್ಯರು ಕೂಡ ಧ್ವನಿಗೂಡಿಸಿದ್ದಾರೆ.

ಆರೋಪ ಎದುರಿಸುತ್ತಿರುವ ಮುಖ್ಯ ನ್ಯಾ.ದಿನಕರನ್ ಅವರು ಕಲಾಪದಲ್ಲಿ ಯಾವುದೇ ಕಾರಣಕ್ಕೂ ಮುಂದುವರಿಯಬಾರದೆಂದು ಹಿರಿಯ ವಕೀಲರು ಈಗಾಗಲೇ ಆಗ್ರಹಿಸಿದ್ದರು. ಏತನ್ಮಧ್ಯೆ ದಿನಕರನ್ ಅವರನ್ನು ವಾಗ್ದಂಡನೆಗೆ ಗುರಿಪಡಿಸುವ ಕುರಿತು ರಾಜ್ಯಸಭೆಯ ವಿಪಕ್ಷ ನಾಯಕರು ಮುಂದಾಗಿರುವುದಾಗಿ ಹೆಸರು ಹೇಳಲಿಚ್ಚಿಸದ ಸದಸ್ಯರೊಬ್ಬರು ತಿಳಿಸಿದ್ದಾರೆ.

ದಿನಕರನ್ ಅವರ ವಿರುದ್ಧ ಆಪಾದನೆಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನ್ಯಾಯಾಧೀಶ ಸ್ಥಾನಕ್ಕೆ ಬಡ್ತಿಯನ್ನು ಈಗಾಗಲೇ ತಡೆ ಹಿಡಿಯಲಾಗಿದೆ. ಅಲ್ಲದೆ, ದಿನಕರನ್ ಅವರಿಗೆ ಬಡ್ತಿ ನೀಡುವಂತೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಸಮಿತಿ ನೀಡಿದ್ದ ಶಿಫಾರಸು ವರದಿಯನ್ನು ಕೂಡ ಸರ್ಕಾರ ವಾಪಸ್ ಕಳುಹಿಸಿತ್ತು.
ಸಂಬಂಧಿತ ಮಾಹಿತಿ ಹುಡುಕಿ