ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಈ ವರ್ಷ ದುಷ್ಕೃತ್ಯಗಳಲ್ಲಿ ಬಲಿಯಾದವರ ಸಂಖ್ಯೆ 2005 (Naxal | Terror | India | Police)
Bookmark and Share Feedback Print
 
ಪ್ರಸಕ್ತ ವರ್ಷ ಜಮ್ಮು-ಕಾಶ್ಮೀರ, ಈಶಾನ್ಯ ರಾಜ್ಯಗಳು, ನಕ್ಸಲ್ ಪೀಡಿತ ರಾಜ್ಯಗಳಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರು, ತೀವ್ರವಾದಿಗಳು ಹಾಗೂ ಈ ಸಂದರ್ಭದಲ್ಲಿ ಬಲಿಯಾದ ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಗಳ ಒಟ್ಟು ಸಂಖ್ಯೆಯನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದೆ. ಒಟ್ಟಾರೆ ಈ ಎಲ್ಲಾ ಘಟನೆಗಳಲ್ಲಿ ಬಲಿಯಾದವರ ಸಂಖ್ಯೆ ಸುಮಾರು 2000ಕ್ಕೂ ಹೆಚ್ಚು.

2009ರ ಅಕ್ಟೋಬರ್ 31ರವರೆಗೆ ಜಮ್ಮು-ಕಾಶ್ಮೀರದಲ್ಲಿ 123 ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಗಳು ವಿವಿಧ ಕಾರ್ಯಾಚರಣೆ ಸಂದರ್ಭಗಳಲ್ಲಿ ಸಾವನ್ನಪ್ಪಿದ್ದಾರೆ ಅಥವಾ ಉಗ್ರರಿಗೆ ಬಲಿಯಾಗಿದ್ದಾರೆ. ಇದು ಕಳೆದ ವರ್ಷ 166 ಆಗಿತ್ತು.

ಅದೇ ಹೊತ್ತಿಗೆ ಇಲ್ಲಿ ಬಲಿಯಾದ ಭಯೋತ್ಪಾದಕ ಸಂಖ್ಯೆಯಲ್ಲೂ ಕಳೆದ ವರ್ಷಕ್ಕಿಂತ (339) ಇಳಿಕೆ ಕಂಡು ಬಂದಿದ್ದು, 2009ರ ಅಕ್ಟೋಬರ್ 31ರವರೆಗೆ 212 ಮಂದಿ ಕೊಲ್ಲಲ್ಪಟ್ಟಿದ್ದಾರೆ.

ಇದೇ ಅವಧಿಯಲ್ಲಿ ದೇಶದ ಈಶಾನ್ಯ ರಾಜ್ಯಗಳಲ್ಲಿ 261 ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಗಳು ಕೊಲ್ಲಲ್ಪಟ್ಟಿದ್ದಾರೆ. 2008ರಲ್ಲಿ 512 ನಾಗರಿಕರು ಮತ್ತು ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದರು. ಕಳೆದ ವರ್ಷ 640 ತೀವ್ರವಾದಿಗಳನ್ನು ಕೊಂದು ಹಾಕಲಾಗಿದ್ದರೆ, ಈ ವರ್ಷದ ಅಕ್ಟೋಬರ್ ತಿಂಗಳಾಂತ್ಯದವರೆಗೆ 497 ಮಂದಿಯನ್ನು ಪೊಲೀಸರು ಬಲಿ ಪಡೆದುಕೊಂಡಿದ್ದಾರೆ.

ಇನ್ನು ಈ ವರ್ಷದ ಅಕ್ಟೋಬರ್ ತಿಂಗಳವರೆಗೆ 742 ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಗಳು ನಕ್ಸಲರ ಕೆಂಗಣ್ಣಿಗೆ ಬಲಿಯಾಗಿದ್ದಾರೆ. ಇದು ಕಳೆದ ವರ್ಷ 721 ಆಗಿತ್ತು. ಇದೇ ಅವಧಿಯಲ್ಲಿ 170 ನಕ್ಸಲೀಯರನ್ನು ಭದ್ರತಾ ಪಡೆಗಳು ಕೊಂದು ಹಾಕಿವೆ. ಕಳೆದ ವರ್ಷ 199 ಮಾವೋವಾದಿ ಉಗ್ರರನ್ನು ಕೊಂದು ಹಾಕಲಾಗಿತ್ತು.

ರಾಜ್ಯಸಭೆಯಲ್ಲಿ ಕೇಳಲಾಗಿದ್ದ ಪ್ರಶ್ನೆಯೊಂದಕ್ಕೆ ಕೇಂದ್ರ ಗೃಹ ಸಚಿವಾಲಯದ ರಾಜ್ಯ ಸಚಿವ ಅಜಯ್ ಮೇಕನ್ ಲಿಖಿತ ಉತ್ತರ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ