ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಓಎಂಸಿ: ಹೈಕೋರ್ಟ್ ವಿರುದ್ಧ ಸರ್ಕಾರ ಸುಪ್ರೀಂ ಕಟಕಟೆಗೆ (OMC | High court | Janardana Reddy | Hydrabad)
Bookmark and Share Feedback Print
 
PTI
ಕರ್ನಾಟಕ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಕುರಿತ ಸಿಬಿಐ ತನಿಖೆಗೆ ಆಂಧ್ರಪ್ರದೇಶ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ಪ್ರಶ್ನಿಸಿ ಆಂಧ್ರ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಓಎಂಸಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆಂಧ್ರ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ಪ್ರಶ್ನಿಸಿ ಆಂಧ್ರ ಸರ್ಕಾರ ಸುಪ್ರೀಂಗೆ ಬುಧವಾರ ಮೇಲ್ಮನವಿ ಸಲ್ಲಿಸಿದ್ದು, ಈ ಬಗ್ಗೆ ಪರಿಶೀಲನೆ ನಡೆಸುವಂತೆ ಅರ್ಜಿಯಲ್ಲಿ ಕೋರಿದೆ.

ಅನಂತಪುರನಲ್ಲಿನ ಕರ್ನಾಟಕ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಚಟುವಟಿಕೆ ನಿಷೇಧಿಸಿ ಆಂಧ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಿದ ಬೆನ್ನಲ್ಲೇ ಓಎಂಸಿ ವಿರುದ್ಧದ ಸಿಬಿಐ ತನಿಖೆಗೂ ಕೂಡ ಆಂಧ್ರ ಹೈಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿತ್ತು.

ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆಗೆ ಆಂಧ್ರಪ್ರದೇಶ ಹೈಕೋರ್ಟ್ ಆರು ವಾರಗಳ ಕಾಲ ತಡೆಯಾಜ್ಞೆ ನೀಡಿ ಆದೇಶ ಕೊಟ್ಟಿತ್ತು.
ಸಂಬಂಧಿತ ಮಾಹಿತಿ ಹುಡುಕಿ