ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » 94ರ ಮುದುಕಿ ಮೇಲೆ ಅಪರಿಚಿತನಿಂದ ಅತ್ಯಾಚಾರ! (Model Town | raped | Punjab town | Police | Old Woman)
Bookmark and Share Feedback Print
 
ಕಾಮಕ್ಕೆ ಕಣ್ಣಿಲ್ಲ ಎಂಬ ಮಾತು ಸತ್ಯ, ಯಾಕೆಂದರೆ ಫಗ್ವಾರ್‌ನ ಮಾಡೆಲ್ ಟೌನ್ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ 94ವರ್ಷದ ಮುದುಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಾಡೆಲ್ ಟೌನ್ ಪ್ರದೇಶದಲ್ಲಿ ವಾಸ್ತವ್ಯ ಹೂಡಿದ್ದ ನಾಸಿಬ್ ಕೌರ್(94) ಎಂಬವರು ಮನೆಯಲ್ಲಿ ಒಬ್ಬಂಟಿಯಾಗಿ ಇದ್ದ ವೇಳೆ, ಅಪರಿಚಿತ ವ್ಯಕ್ತಿಯೊಬ್ಬ ಬಂದು ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾನೆ.

ಈ ಹಣ್ಣು,ಹಣ್ಣು ವಯಸ್ಸಿನಲ್ಲಿ ಅತ್ಯಾಚಾರಕ್ಕೊಳಗಾದ ಅಜ್ಜಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುದುಕಿ ನೀಡಿದ ದೂರಿನ ಮೇಲೆ ಪೊಲೀಸರು ಅತ್ಯಾಚಾರ, ಅತಿಕ್ರಮ ಪ್ರವೇಶದ ದೂರನ್ನು ದಾಖಲು ಮಾಡಿಕೊಂಡಿರುವುದಾಗಿ ಫಗ್ವಾರ್ ಡಿಎಸ್ಪಿ ಎಚ್.ಪಿ.ಎಸ್.ಖಾಕ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ