ರಾಜಸ್ತಾನ ರಾಜ್ಯಪಾಲೆ ಪ್ರಭಾ ರಾವ್ ಇತ್ತೀಚೆಗಷ್ಟೇ ನಿಧನರಾದ ಹಿನ್ನೆಲೆಯಲ್ಲಿ ಪಂಜಾಬ್ ರಾಜ್ಯಪಾಲ ಶಿವರಾಜ್ ಪಾಟೀಲ್ ಅವರಿಗೆ ರಾಜಸ್ತಾನದ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ. ನಿನ್ನೆ ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜಸ್ತಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಗದೀಶ್ ಭಲ್ಲಾ ಅವರು ಪಾಟೀಲ್‌ರಿಗೆ ಪ್ರಮಾಣ ವಚನ ಬೋಧಿಸಿದರು.