ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಯೋಧ್ಯೆ- ಮಾತುಕತೆ ವಿಫಲವಾದರೆ ತೀರ್ಪು ಸ್ವೀಕರಿಸಿ: ಪ್ರಣಬ್ (Ayodhya dispute | Pranab Mukherjee | Ram Mandir | Babri Masjid)
Bookmark and Share Feedback Print
 
ಮಾತುಕತೆಯ ಮೂಲಕ ಅಯೋಧ್ಯೆ ಒಡೆತನ ಕುರಿತ ವಿವಾದವನ್ನು ಬಗೆಹರಿಸಲು ಸಾಧ್ಯವಾಗದೇ ಇದ್ದರೆ ಸಂಬಂಧಪಟ್ಟವರು ನ್ಯಾಯಾಲಯ ನೀಡುವ ತೀರ್ಪನ್ನು ಒಪ್ಪಿಕೊಳ್ಳಬೇಕು ಎಂದು ಕೇಂದ್ರ ವಿತ್ತ ಸಚಿವ ಪ್ರಣಬ್ ಮುಖರ್ಜಿ ಸೋಮವಾರ ಹೇಳಿದ್ದಾರೆ.

60 ವರ್ಷಗಳಷ್ಟು ಹಳೆಯದಾದ ಪ್ರಕರಣದ ತೀರ್ಪು ಮುಂದೂಡುವ ಕುರಿತು ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆ ನಡೆಸುವ ದಿನದ ಮೊದಲು ಪ್ರತಿಕ್ರಿಯೆ ನೀಡಿರುವ ಸಚಿವರು, ಉಭಯ ಬಣಗಳು ತೀರ್ಪನ್ನು ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.

ಅಯೋಧ್ಯೆ ಒಡೆತನ ವಿವಾದದ ಕುರಿತು ಪ್ರಕರಣ ದಾಖಲಿಸಿರುವ ಎರಡು ಬಣಗಳು ಸಮಸ್ಯೆಯನ್ನು ಸಮಾಲೋಚನೆ ಮೂಲಕ ಬಗೆಹರಿಸಲು ಯತ್ನಿಸಬೇಕು. ಅದು ಸಾಧ್ಯವಾಗದೆ ಇದ್ದರೆ ನ್ಯಾಯಾಲಯ ನೀಡುವ ತೀರ್ಪನ್ನು ಒಪ್ಪಿಕೊಳ್ಳಬೇಕು ಎಂದು ಕಾರ್ಯಕ್ರಮದ ನಂತರ ಪತ್ರಕರ್ತರೊಂದಿಗೆ ಮಾತನಾಡುತ್ತಾ ಮುಖರ್ಜಿ ತಿಳಿಸಿದರು.

ಸೆಪ್ಟೆಂಬರ್ 24ರಂದು ಅಲಹಾಬಾದ್ ಹೈಕೋರ್ಟಿನ ಲಕ್ನೋ ಪೀಠವು ಅಯೋಧ್ಯೆ ಒಡೆತನದ ತೀರ್ಪು ನೀಡಬೇಕಿತ್ತು. ತೀರ್ಪನ್ನು ಮುಂದೂಡಬೇಕೆಂದು ಮಾಡಿದ್ದ ಮನವಿಯನ್ನು ಹೈಕೋರ್ಟ್ ತಳ್ಳಿ ಹಾಕಿದ್ದರಿಂದ, ಅರ್ಜಿದಾರರೊಬ್ಬರು ಸುಪ್ರೀಂ ಕೋರ್ಟ್ ಪ್ರವೇಶಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಸುಪ್ರೀಂ, ಸೆ.28ರವರೆಗೆ ತೀರ್ಪು ನೀಡಬಾರದು ಎಂದು ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ಈ ಕುರಿತು ಮಂಗಳವಾರ ಸುಪ್ರೀಂ ವಿಚಾರಣೆ ನಡೆಸಿ, ಹೈಕೋರ್ಟ್ ತೀರ್ಪು ಮುಂದೂಡುವ ಕುರಿತು ತನ್ನ ನಿರ್ಧಾರ ಪ್ರಕಟಿಸಲಿದೆ.

ಪರಸ್ಪರ ಪ್ರಕರಣ ದಾಖಲಿಸಿಕೊಂಡಿರುವ ಉಭಯ ಬಣಗಳು ಒಂದೆಡೆ ಕೂತು, ಸೌಹಾರ್ದಯುತ ಪರಿಹಾರ ಕಂಡುಕೊಂಡಲ್ಲಿ ಅದನ್ನು ನಾವು ಒಪ್ಪಿಕೊಳ್ಳುತ್ತೇವೆ. ಅದು ಸಾಧ್ಯವಾಗದೆ ಇದ್ದಲ್ಲಿ ನ್ಯಾಯಾಲಯದ ತೀರ್ಪನ್ನು ಎಲ್ಲರೂ ಸ್ವೀಕರಿಸಬೇಕು ಎಂದು ಪ್ರಣಬ್ ಅಭಿಪ್ರಾಯಪಟ್ಟರು.

ದೇಶದಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನಡೆಯಲಿರುವುದರಿಂದ ಶ್ರೀರಾಮ ಜನ್ಮಭೂಮಿ - ಬಾಬ್ರಿ ಮಸೀದಿ ವಿವಾದದ ತೀರ್ಪನ್ನು ಮುಂದಕ್ಕೆ ಹಾಕಬೇಕು ಎಂದು ಮನವಿ ಮಾಡಿಕೊಳ್ಳಲಾಗಿತ್ತು.
ಸಂಬಂಧಿತ ಮಾಹಿತಿ ಹುಡುಕಿ