ಮಾರಕವಾದ ರೋಗಗಳನ್ನು ತಡೆಗಟ್ಟುವ ಸಲುವಾಗಿ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲಿಯೊ ಲಸಿಕೆ ನೀಡಲಾಗುತ್ತದೆ. ಇದರಂತೆ ಭಾನುವಾರ ದೇಶದದ್ಯಾಂತ ಪೊಲಿಯೊ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.
ಆದರೆ ಎರಡು ವರ್ಷದ ಮಗುವೊಂದು ಪೊಲಿಯೊ ಲಸಿಕೆ ಪಡೆದ ತಕ್ಷಣ ಸಾವಿಗೆ ಶರಣಾಗಿರುವ ಆಘಾತಕಾರಿ ಘಟನೆ ಚೆನ್ನೈಯಿಂದ ವರದಿಯಾಗಿದೆ. ಆದರೆ ಪೊಲಿಯೊ ಲಸಿಕೆ ಪಡೆದ ಹಿನ್ನೆಲೆಯಲ್ಲಿ ಮರಣ ಸಂಭವಿಸಿದೆ ಎಂಬುವುದು ಇನ್ನೂ ಸ್ಪಷ್ಟವಾಗಿಲ್ಲ.
ಹೀಗಾಗಿ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ. ಇದರ ನಂತರವಷ್ಟೇ ಸಾವಿನ ನಿಖರ ಕಾರಣ ಬೆಳಕಿಗೆ ಬರಲಿದೆ.
ರಾಜ್ಯದಲ್ಲಿಯೂ ಪೊಲಿಯೊ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಧಿಕೃತ ಚಾಲನೆ ನೀಡಿದ್ದರು.