ತಿರಂಗ ಯಾತ್ರೆ ನಿಲ್ಲಿಸುವುದಿಲ್ಲ; ಸರಕಾರ ವಿರುದ್ಧ ಜೇಟ್ಲಿ ಕಿಡಿ
ನವೆದಹಲಿ, ಭಾನುವಾರ, 23 ಜನವರಿ 2011( 17:16 IST )
ಗಣರಾಜ್ಯೋತ್ಸವದಂದು ಜಮ್ಮು ಕಾಶ್ಮೀರದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸರಕಾರ ಅಡ್ಡಿಪಡಿಸಲು ಯತ್ನಿಸುತ್ತಿದೆ ಎಂದು ರಾಜ್ಯಸಭಾ ಪ್ರತಿಪಕ್ಷ ನಾಯಕ ಅರುಣ್ ಶೇಟ್ಲಿ ಕಿಡಿ ಕಾರಿದ್ದಾರೆ.
ಯಾವುದೇ ಕಾರಣಕ್ಕೂ ಪಕ್ಷ ಹಮ್ಮಿಕೊಂಡಿರುವ ತಿರಂಗ ಯಾತ್ರೆ ನಿಲ್ಲಿಸುವುದಿಲ್ಲ. ಹಾಗೆಯೇ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದವರು ಸ್ಪಷ್ಟಪಡಿಸಿದರು.
ರಾಷ್ಟ್ರ ಧ್ವಜಾರೋಹಣ ಹಿನ್ನೆಲೆಯಲ್ಲಿ ಜಮ್ಮುವಿಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆ ಹಿಡಿದಿದ್ದರು. ಆದರೆ ಇದರ ವಿರುದ್ಧ ಸಿಡಿದೆದ್ದಿರುವ ಜೇಟ್ಲಿ, ರಾಷ್ಟ್ರ ಧ್ವಜಾರೋಹಣ ಮಾಡುವುದು ದೇಶ ದ್ರೋಹವೇ ಎಂದು ಪ್ರಶ್ನಿಸಿದರು.
ಜಮ್ಮು ಕಾಶ್ಮೀರದ ಲಾಲ್ ಚೌಕ್‌ನಲ್ಲಿ ಗಣರಾಜ್ಯೋತ್ಸವದಂದು ರಾಷ್ಟ್ರಧ್ವಜ ಹಾರಿಸಲು ಬಿಜೆಪಿ ನಿರ್ಧರಿಸಿತ್ತು. ಇದರಂತೆ ಪಕ್ಷ ಏಕತಾ ಯಾತ್ರೆ ಹಮ್ಮಿಕೊಂಡಿತ್ತು. ಆದರೆ ತಿರಂಗಾ ಯಾತ್ರೆಗೆ ತೆರಳುತ್ತಿದ್ದ ಕಾರ್ಯಕರ್ತರನ್ನು ತಡೆದು ಬಲವಂತವಾಗಿ ವಾಪಾಸ್ ಕಳುಹಿಸಲಾಗುತ್ತಿದೆ.