ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಾಬ್ರಿ ಕೇಸ್- ಕಾಂಗ್ರೆಸ್‌ನಿಂದ ಚೀಪ್ ಪಾಲಿಟಿಕ್ಸ್: ಬಿಜೆಪಿ (BJP | Congress | Babri Masjid | LK Advani)
ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಎಲ್.ಕೆ. ಅಡ್ವಾಣಿ ಅವರ ವಿರುದ್ಧದ ಕ್ರಿಮಿನಲ್ ಪಿತೂರಿ ಆರೋಪವನ್ನು ಕೈ ಬಿಟ್ಟಿರುವುದರ ವಿರುದ್ಧ ಸಿಬಿಐ ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಿರುವುದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ಕಾಂಗ್ರೆಸ್ ಕೋಮು ಧ್ರುವೀಕರಣದಲ್ಲಿ ತೊಡಗಿಸಿಕೊಂಡಿದೆ ಎಂದು ಆರೋಪಿಸಿದೆ.

ನ್ಯಾಯಾಲಯಗಳಲ್ಲಿರುವ ಪ್ರಕರಣಗಳ ಬಗ್ಗೆ ಕಾಂಗ್ರೆಸ್ ರಾಜಕೀಯದ ಆಟ ಆಡಬಾರದು. ಅದು ಕೋಮು ಧ್ರುವೀಕರಣ ಮತ್ತು ಎರಡು ಧರ್ಮಗಳ-ಸಮುದಾಯಗಳ ನಡುವಿನ ಐಕ್ಯತೆಯನ್ನು ಮುರಿಯಲು ಯತ್ನಿಸುತ್ತಿದೆ. ಕಾಂಗ್ರೆಸ್ ಒಡೆದು ಆಳುವ ನೀತಿಯ ಆಳ್ವಿಕೆಯನ್ನೇ ನಂಬಿಕೊಂಡು ಬಂದಿದೆ ಎಂದು ಬಿಜೆಪಿ ವಕ್ತಾರ ಶಹನಾವಾಜ್ ಹುಸೇನ್ ಟೀಕಿಸಿದರು.

ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ನಾಯಕರಾದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಮುಂತಾದವರ ವಿರುದ್ಧದ ಕ್ರಿಮಿನಲ್ ಪಿತೂರಿ ಆರೋಪಗಳನ್ನು ಅಲಹಾಬಾದ್ ಹೈಕೋರ್ಟ್ ಕೈ ಬಿಟ್ಟಿರುವುದನ್ನು ಸಿಬಿಐ ನಿನ್ನೆಯಷ್ಟೇ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿತ್ತು.

'ಹಲವು ಪ್ರಕರಣಗಳಲ್ಲಿ ಕಾಂಗ್ರೆಸ್, ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ತನಿಖಾ ಸಂಸ್ಥೆಗಳನ್ನು ಈ ರೀತಿಯಾಗಿ ದುರ್ಬಳಕೆ ಮಾಡಿಕೊಳ್ಳುವ ಕಾಂಗ್ರೆಸ್ ತಂತ್ರಗಳಿಗೆ ನಾವು ಅವಕಾಶ ನೀಡುವುದಿಲ್ಲ' ಎಂದು ಹುಸೇನ್ ಪರೋಕ್ಷ ಎಚ್ಚರಿಕೆ ನೀಡಿದರು.

ಬಾಬ್ರಿ ಮಸೀದಿಯನ್ನು ಕೆಡವಲು ಎಲ್.ಕೆ.ಆಡ್ವಾಣಿ ಸೇರಿದಂತೆ 20 ಮಂದಿ ಜನರನ್ನು ಕೆರಳಿಸುವ ನಿಟ್ಟಿನಲ್ಲಿ ಉದ್ರೇಕಕಾರಿ ಭಾಷಣ ಮಾಡಿ, ಹಿಂಸಾಚಾರಕ್ಕೆ ಎಡೆ ಮಾಡಿಕೊಟ್ಟಿದ್ದರು ಎಂದು ಸಿಬಿಐ ಆರೋಪಿತ್ತು. ಆದರೆ ಪ್ರಕರಣದ ವಿಚಾರಣೆ ನಡೆಸಿದ್ದ ಆಧೀನ ನ್ಯಾಯಾಲಯವು, ಆಡ್ವಾಣಿ ವಿರುದ್ಧದ ಆರೋಪವನ್ನು ತಳ್ಳಿ ಹಾಕಿತ್ತು. ಇದನ್ನು ಅಲಹಾಬಾದ್ ಹೈಕೋರ್ಟ್ ಪುರಸ್ಕರಿಸಿತ್ತು. ಇದರ ವಿರುದ್ಧ ಸಿಬಿಐ ಪ್ರಸಕ್ತ ಸುಪ್ರೀಂ ಮೊರೆ ಹೋಗಿದೆ.
ಇವನ್ನೂ ಓದಿ