ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬನ್ನಿ, ಆಂಧ್ರದ ರೈತರಿಗಾಗಿ ಹೋರಾಡಿ: ರಾಹುಲ್‌ಗೆ ನಾಯ್ಡು (Rahul Gandhi | N Chandrababu | Andhra Pradesh | SEZ)
ಉತ್ತರ ಪ್ರದೇಶದ ಭತ್ತಾ ಪ್ರಸೂಲ್‌ನಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ಬೆಂಬಲಿಸಿ ಬಂಧನಕ್ಕೊಳಗಾಗಿದ್ದ ಹಿನ್ನೆಲೆಯಲ್ಲಿ ತಮ್ಮ ರಾಜ್ಯದ ರೈತರ ಪರವಾಗಿಯೂ ಹೋರಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್‌ ಗಾಂಧಿ ಅವರನ್ನು ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಒತ್ತಾಯಿಸಿದ್ದಾರೆ. ಆಂಧ್ರ ಪ್ರದೇಶದಲ್ಲಿ ವಿಶೇಷ ಆರ್ಥಿಕ ವಲಯ (ಎಸ್‌ಇಝಡ್‌)ಕ್ಕಾಗಿ ಕೃಷಿ ಭೂಮಿ ಸ್ವಾಧೀನದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುವಂತೆ ಶುಕ್ರವಾರ ಅವರು ಆಹ್ವಾನಿಸಿದ್ದಾರೆ.

ಕೃಷ್ಣಾ ಜಿಲ್ಲೆಯಲ್ಲಿ ರೈತರೊಂದಿಗೆ ಸಂವಾದ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ನಾಯ್ಡು, ರಾಜ್ಯದ ಕಾಂಗ್ರೆಸ್‌ ಸರಕಾರ ಕೈಗಾರಿಕೆಗಳ ಲಾಭಕ್ಕಾಗಿ ಕಳೆದ 6 ವರ್ಷಗಳಿಂದ ರೈತರ ಭೂಮಿಯನ್ನು ವಶಪಡಿಸಿಕೊಂಡು ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ಹೋರಾಡುವ ಬದಲು ರಾಹುಲ್‌ ಗಾಂಧಿ ಅವರು ಇಲ್ಲಿನ ರೈತರ ಪರವಾಗಿ ಹೋರಾಟ ನಡೆಸಬೇಕು ಎಂದು ಹೇಳಿದರು.

ಕಾಂಗ್ರೆಸ್‌ ಸರಕಾರ ಇಲ್ಲಿನ ರೈತರ ಭೂಮಿಯನ್ನು ಒತ್ತಾಯಪೂರ್ವಕವಾಗಿ ವಶಪಡಿಸಿಕೊಳ್ಳುತ್ತಿದೆ ಎಂದೂ ನಾಯ್ಡು ಆಪಾದಿಸಿದರು.ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ದೊರೆಯುವವರೆಗೂ ಸರಕಾರದ ವಿರುದ್ಧ ಹೋರಾಟ ಮುಂದುವರಿಸುವಂತೆ ರೈತರಿಗೆ ಕರೆ ನೀಡಿದ ನಾಯ್ಡು, ರೈತರ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಇವನ್ನೂ ಓದಿ