ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಸತ್ಯಾಗ್ರಹಿಗಳ ಎತ್ತಂಗಡಿ: ಚಾಟಿ ಬೀಸಿದ ಸುಪ್ರೀಂ ಕೋರ್ಟ್ (Baba Ramdev | Supreme Court | Black Money | Ramlila Maidan)
ವಿದೇಶದಲ್ಲಿ ಭ್ರಷ್ಟಾಚಾರಿಗಳು ಕೂಡಿ ಹಾಕಿರುವ ಕಾಳಧನವನ್ನು ದೇಶಕ್ಕೆ ತಂದು ಜನ ಕಲ್ಯಾಣಕ್ಕೆ ವಿನಿಯೋಗಿಸಬೇಕು ಎಂದು ಆಗ್ರಹಿಸಿ ಸತ್ಯಾಗ್ರಹ ನಡೆಸುತ್ತಿದ್ದ ಯೋಗ ಗುರು ಬಾಬಾ ರಾಮದೇವ್ ಮತ್ತು ಲಕ್ಷಾಂತರ ಬೆಂಬಲಿಗರನ್ನು ಹೊಡೆದೋಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್, ಕೇಂದ್ರ ಸರಕಾರಕ್ಕೆ ನೋಟೀಸ್ ಜಾರಿಗೊಳಿಸಿದೆ.

ಕಪ್ಪು ಹಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿರುವ ಕೇಂದ್ರ ಸರಕಾರಕ್ಕೆ ಇದೀಗ ಮತ್ತೆ ಚಾಟಿ ಬೀಸಿದಂತಾಗಿದೆ.

ಸತ್ಯಾಗ್ರಹಿ ಬಾಬಾ ಮತ್ತಿತರರನ್ನು ಬಲವಂತವಾಗಿ ಎತ್ತಿಕೊಂಡು ಹೋಗಿದ್ದೇಕೆ ಎಂದು ಕೇಳಿರುವ ಸುಪ್ರೀಂ ಕೋರ್ಟ್ ಖಂಡಪೀಠವು, ಈ ಕುರಿತು ಉತ್ತರಿಸಲು ಎರಡು ವಾರಗಳ ಕಾಲಾವಕಾಶ ನೀಡಿದೆ.

ನ್ಯಾಯಮೂರ್ತಿ ಬಿ.ಎಸ್.ಚೌಹಾಣ್ ಹಾಗೂ ಸ್ವತಂತ್ರ ಕುಮಾರ್ ಅವರನ್ನೊಳಗೊಂಡ ಪೀಠವು ಕೇಂದ್ರ ಗೃಹ ಕಾರ್ಯದರ್ಶಿ, ದೆಹಲಿ ಮುಖ್ಯ ಕಾರ್ಯದರ್ಶಿ, ದೆಹಲಿ ಆಡಳಿತ ಮತ್ತು ದೆಹಲಿ ಪೊಲೀಸ್ ಆಯುಕ್ತರಿಗೆ ನೋಟೀಸ್ ಜಾರಿಗೊಳಿಸಿದೆ. ಜುಲೈ ತಿಂಗಳ ಎರಡನೇ ವಾರ ಮತ್ತೆ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ
ಕಪ್ಪು ಹಣದ ಮೇಲೆ ನಿದ್ದೆ ಮಾಡ್ತಿದೀರಾ: ಕೇಂದ್ರಕ್ಕೆ ಸುಪ್ರೀಂ ತಪರಾಕಿ
ಕಪ್ಪು ಹಣ ಇರುವ ಭಾರತೀಯರ ಪಟ್ಟಿ ನನ್ನಲ್ಲಿದೆ: ಜೂಲಿಯಸ್ ಅಸಾಂಜ್
ಇವನ್ನೂ ಓದಿ