ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರಾಜ್ಯ ಸರಕಾರಕ್ಕೆ ಗೃಹಸಚಿವಾಲಯ ನೋಟಿಸ್ ಜಾರಿ (Yeddiyurappa | Illigal mining | P.Chidambram)
PTI
ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಕಾನೂನು ವ್ಯವಸ್ಥೆ ಕುರಿತಂತೆ ಕೇಂದ್ರದ ಆತಂಕಗಳಿಗೆ ಸ್ಪಷ್ಟನೆ ನೀಡುವಂತೆ ಕೇಂದ್ರ ಗೃಹಸಚಿವಾಲಯ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.

ಕಾನೂನು ವ್ಯವಸ್ಥೆ, ಅಕ್ರಮ ಗಣಿಗಾರಿಕೆ ಮತ್ತು ಅಲ್ಪ ಸಂಖ್ಯಾತರ ರಕ್ಷಣೆಗೆ ಸಂಬಂಧಿಸಿದಂತೆ ತಿದ್ದುಪಡಿ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿ ಗೃಹ ಸಚಿವ ಪಿ.ಚಿದಂಬರಂ 15 ದಿನಗಳ ಹಿಂದೆಯೇ ಪತ್ರ ಬರೆದಿದ್ದಾರೆ ಎಂದು ಗೃಹಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸಕ್ತ ಸನ್ನಿವೇಶದಲ್ಲಿ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಮತ್ತು ಸಂವಿಧಾನದ ಪ್ರಸ್ತಾವನೆಗಳಿಗೆ ಅನುಗುಣವಾಗಿ ಅಡಳಿತ ನಡೆಯುತ್ತಿಲ್ಲ ಎಂದು ರಾಜ್ಯಪಾಲರ ವರದಿ ತಿಳಿಸಿದೆ. ಸಂವಿಧಾನದ 356(1) ವಿಧಿಯ ಪ್ರಸ್ತಾವನೆ ಹೇರಬಹುದಾಗಿದೆ. ಆದರೆ, ಸಿದ್ದುಪಡಿ ಕ್ರಮ ಕೈಗೊಂಡು ಸಂವಿಧಾನಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಲು ರಾಜ್ಯ ಸರಕಾರಕ್ಕೆ ಸಲಹೆ ನೀಡುವುದು ಸೂಕ್ತ ಎಂದು ಕೇಂದ್ರ ನಿರ್ಧರಿಸಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಸ್ವಾಧೀನಪಡಿಸಿಕೊಂಡ ಭೂಮಿಯ ಡಿ ನೋಟಿಫಿಕೇಶನ್ ಮೂಲಕ ಸಾರ್ವಜನಿಕ ಹಿತ ಬಲಿಕೊಡಲಾಗಿದೆ. ಅಕ್ರಮ ಗಣಿಗಾರಿಕೆ ಮುಂದುವರಿದಿರುವ ಕುರಿತು ಕೇಂದ್ರಕ್ಕೆ ದೂರುಗಳು ಬರುತ್ತಿವೆ ಎಂದು ಪತ್ರದಲ್ಲಿ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ತಿಳಿಸಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಯಡಿಯೂರಪ್ಪ, ಅಕ್ರಮ ಗಣಿಗಾರಿಕೆ, ಪಿಚಿದಂಬರಂ