ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ತೃಣಮೂಲ-ಕಾಂಗ್ರೆಸ್ ಮೈತ್ರಿ ಬಿರುಕು: ಪ್ರಣಬ್ ಪುತ್ರ ರಾಜೀನಾಮೆ (TMC-Congress coalition | Abhijit Mukherjee | Pranab Mukherjee | West Bengal)
PTI
ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಮೈತ್ರಿ ತುಂಬಾ ಗಾಢವಾಗಿದೆ ಎಂದೇ ಭಾವಿಸಲಾಗಿತ್ತು. ಆದರೆ, ದೀದಿ ಅಧಿಕಾರವಹಿಸಿಕೊಂಡು ಕೇವಲ ಎರಡು ತಿಂಗಳ ಅವಧಿಯಲ್ಲಿ ಮೈತ್ರಿಯಲ್ಲಿ ಬಿರುಕು ಮೂಡಿಸಿದ್ದು ಕೇಂದ್ರದ ವಿತ್ತ ಸಚಿವ ಪ್ರಣಬ್ ಮುಖರ್ಜಿ ಪುತ್ರ ಅಭಿಜಿತ್ ಕಾಂಗ್ರೆಸ್ ಪಕ್ಷವನ್ನು ತೊರೆದು ಹೊರಬಂದಿರುವ ವರದಿ ಬಹಿರಂಗವಾಗಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆದೇಶದ ಮೇರೆಗೆ, ಮೊದಲ ಬಾರಿಗೆ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ಅಭಿಜಿತ್ ಅವರನ್ನು ಪಶ್ಚಿಮ ಬಂಗಾಳದ ಮೂಲಸೌಕರ್ಯ ಅಭಿವೃದ್ಧಿ ಹಣಕಾಸು ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.

ಆದರೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಕಾರ್ಯವೈಖರಿ, ಕಾಂಗ್ರೆಸ್ ಪಕ್ಷಕ್ಕೆ ಅಸಮಧಾನ ತಂದಿದೆ ಎಂದು ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಪ್ರದೀಪ್ ಚಟರ್ಜಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಪತ್ರ ಬರೆದು ಕಾಂಗ್ರೆಸ್ ಪಕ್ಷದ ಮುಖಂಡರನ್ನು ಸಂಪರ್ಕಿಸದೆ ಯಾರನ್ನೂ ಯಾವುದೇ ಹುದ್ದೆಗೆ ನೇಮಕ ಮಾಡುವುದು ಬೇಡ ಎಂದು ಕೋರಿದ ಹಿನ್ನೆಲೆಯಲ್ಲಿ ಕೇಂದ್ರ ವಿತ್ತಸಚಿವ ಪ್ರಣಬ್ ಮುಖರ್ಜಿ ತಮ್ಮ ಮಗ ಅಭಿಜಿತ್‌ಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದರಿಂದ ಹೈಕಮಾಂಡ್ ಆದೇಶದ ಮೇರೆಗೆ ಅದ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಕುರಿತಂತೆ ಹೆಚ್ಚಿನ ಹೇಳಿಕೆಗಳನ್ನು ನೀಡಲು ಬಯಸುವುದಿಲ್ಲ ಎಂದು ಪ್ರಣಬ್ ಪುತ್ರ ಕಾಂಗ್ರೆಸ್ ಶಾಸಕ ಅಭಿಜಿತ್ ತಿಳಿಸಿದ್ದಾರೆ.

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಕಂಪೆನಿಯಲ್ಲಿ ಹಿರಿ ಕಾರ್ಯನಿರ್ವಾಹಕ ರಾಗಿದ್ದ ಅಭಿಜಿತ್, ಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ನಲ್‌ಹಾಟಿ ವಿಧಾನಸಭಾ ಕ್ಷೇತ್ರದಿಂದ ಭಾರಿ ಮತಗಳ ಅಂತರದಿಂದ ಆಯ್ಕೆಯಾಗಿದ್ದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ತೃಣಮೂಲ ಕಾಂಗ್ರೆಸ್, ಕಾಂಗ್ರೆಸ್, ಅಭಿಜಿತ್ ಮುಖರ್ಜಿ, ಪ್ರಣಬ್ ಮುಖರ್ಜಿ, ಪಶ್ಚಿಮ ಬಂಗಾಳ