ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » 2ಜಿ: ಪ್ರಧಾನಿ, ಚಿದು ಪಾತ್ರದ ಬಗ್ಗೆ ಚರ್ಚೆಯಾಗಲಿ: ಬಿಜೆಪಿ
2ಜಿ ತರಂಗ ಗುಚ್ಚ ಹಗರಣದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಗೃಹ ಸಚಿವ ಪಿ.ಚಿದಂಬರಂ ಪಾತ್ರದ ಬಗ್ಗೆ ತುರ್ತಾಗಿ ಸಂಸತ್ತಿನಲ್ಲಿ ಚರ್ಚಿಸುವ ಅಗತ್ಯವಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

2ಜಿ ಹಗರಣದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಗೃಹ ಸಚಿವ ಪಿ.ಚಿದಂಬರಂ ಅವರ ಸಮಾನ ಪಾತ್ರವಿದೆ ಎಂದು ಬಿಜೆಪಿ ವಕ್ತಾರ ಪ್ರಕಾಶ್ ಜಾವ್ಡೇಕರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ 2ಜಿ ಹಗರಣಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ನೀಡಲು ನೋಟಿಸ್ ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.

2ಜಿ ಹಗರಣದಲ್ಲಿ ಪ್ರಧಾನಿಯವರ ಯಾವುದೇ ಪಾತ್ರವಿಲ್ಲ ಎಂದು ಪ್ರಧಾನಿ ಕಚೇರಿಯ ಅಧಿಕಾರಿಗಳು ಹೇಳಿಕೆಯೊಂದನ್ನು ಹೊರಡಿಸಿದ್ದರಿಂದ, ಅಧಿವೇಶನದಲ್ಲಿ ತುರ್ತಾಗಿ ಚರ್ಚಿಸಬೇಕಾಗಿದೆ ಎಂದು ಜಾವ್ಡೇಕರ್ ತಿಳಿಸಿದ್ದಾರೆ.

2ಜಿ ಹಗರಣ ತೀರ್ಮಾನದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಅಂದಿನ ವಿತ್ತಸಚಿವ ಪಿ.ಚಿದಂಬರಂ ಸಮಾನ ಪಾತ್ರ ಹೊಂದಿರುವುದರಿಂದ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎನ್ನುವುದು ಬಿಜೆಪಿ ನಿಲುವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಧಿವೇಶನ ಅಂತ್ಯವಾಗುವ ಕೊನೆಯ ದಿನದವರೆಗೆ ಪ್ರಧಾನಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಲಿದೆ ಪಕ್ಷದ ವಕ್ತಾರ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, 2ಜಿ ಹಗರಣ, ಮನಮೋಹನ್ ಸಿಂಗ್, ಪಿಚಿದಂಬರಂ, ಪ್ರಕಾಶ್ ಜಾವ್ಡೇಕರ್