ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಲೋಕಾಯುಕ್ತ ವರದಿ ತಿರಸ್ಕರಿಸಲು ಬಿಜೆಪಿ ಸಂಚು: ಕಾಂಗ್ರೆಸ್ (B S Yeddyurappa | BJP | Dump Lokayukta Report | Congress)
PTI
ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತರಾಧಿಕಾರಿ ಆಯ್ಕೆ ಗಡುವು ಮುಕ್ತಾಯಗೊಂಡಿರುವಂತೆ, ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿದ ಯಡಿಯೂರಪ್ಪನವರನ್ನು ಸಂತೈಸಲು, ಲೋಕಾಯುಕ್ತ ಅಕ್ರಮ ಗಣಿ ವರದಿಯನ್ನು ತಿರಸ್ಕರಿಸಲು ಬಿಜೆಪಿ ಹೈಕಮಾಂಡ್ ಸಂಚು ರೂಪಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಪ್ರಾದೇಶಿಕ ಮಾಧ್ಯಮಗಳ ವರದಿಗಳನ್ನು ಉಲ್ಲೇಖಿಸಿದ ಕಾಂಗ್ರೆಸ್ ಪಕ್ಷದ ವಕ್ತಾರ ಮನೀಷ್ ತಿವಾರಿ, ಹೈಕಮಾಂಡ್ ಲೋಕಾಯುಕ್ತರ ಅಕ್ರಮ ಗಣಿ ವರದಿಯನ್ನು ರಾಜ್ಯ ಸರಕಾರ ತಿರಸ್ಕರಿಸುವ ಭರವಸೆಯನ್ನು ನೀಡಿಯೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜೀನಾಮೆಯನ್ನು ಪಡೆದುಕೊಂಡಿದೆ ಎಂದು ಕಿಡಿಕಾರಿದ್ದಾರೆ.

ಯಡಿಯೂರಪ್ಪನವರ ರಾಜೀನಾಮೆಯನ್ನು ಯಾವ ಕಾರಣಕ್ಕೆ ತಡೆಹಿಡಿಯಲಾಯಿತು ಎನ್ನುವ ಬಗ್ಗೆ ಬಿಜೆಪಿ ಹೈಕಮಾಂಡ್ ಸ್ಪಷ್ಟನೆ ನೀಡಬೇಕು. ಲೋಕಾಯುಕ್ತರ ಅಕ್ರಮ ಗಣಿ ವರದಿಯನ್ನು ತಿರಸ್ಕರಿಸುವ ಹಕ್ಕು ಸರಕಾರಕ್ಕಿರುವುದರಿಂದ ಅಕ್ರಮ ಗಣಿ ವರದಿಯನ್ನು ತಿರಸ್ಕರಿಸುವ ಭರವಸೆಯನ್ನು ನೀಡಿಯೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜೀನಾಮೆಯನ್ನು ಹೈಕಮಾಂಡ್ ಪಡೆದಿದೆ ಎನ್ನುವ ವರದಿಗಳು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿವೆ ಎಂದು ಹೇಳಿದ್ದಾರೆ.

ಸುಪ್ರೀಂಕೋರ್ಟ್ ಕೂಡಲೇ ಮಧ್ಯಪ್ರವೇಶಿಸಿ, ಇಂತಹ ವಿಷಯಗಳ ಬಗ್ಗೆ ಗಮನಹರಿಸಬೇಕು. ಅಕ್ರಮ ಗಣಿ ಪ್ರಕರಣಗಳನ್ನು ಸುಪ್ರೀಂಕೋರ್ಟ್ ಮೇಲ್ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷ ಸುಪ್ರೀಂಕೋರ್ಟ್‌ಗೆ ಮನವಿ ಮಾಡಲು ನಿರ್ಧರಿಸಿದೆ ಎಂದು ಮನೀಷ್ ತಿವಾರಿ ತಿಳಿಸಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಎಸ್ಯಡಿಯೂರಪ್ಪ, ಬಿಜೆಪಿ, ಲೋಕಾಯುಕ್ತ ವರದಿ, ಕಾಂಗ್ರೆಸ್