ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಸೋನಿಯಾ ಗಾಂಧಿಗೆ ಕಾಡುತ್ತಿರುವುದೇ ಸರ್ವೈಕಲ್ ಕ್ಯಾನ್ಸರ್ ? (Sonia Gandhi | Rahul Gandhi | In Charge | Surgery Abroad | Congress)
PTI
ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಅಮೆರಿಕದಲ್ಲಿ ಸರ್ವೈಕಲ್ ಕ್ಯಾನ್ಸರಯಶಸ್ವಿಚಿಕಿತ್ಸೆಗೊಳಗಾಗಿದ್ದಾರೆ ಎನ್ನಲಾಗುತ್ತಿದೆ. ವೈದ್ಯರು ಸೋನಿಯಾಗೆ ಒಂದು ತಿಂಗಳವರೆಗೆ ವಿಶ್ರಾಂತಿ ಪಡೆಯಲು ಸೂಚಿಸಿದ್ದರಿಂದ, ಪಕ್ಷದ ವ್ಯವಹಾರಗಳನ್ನು ನೋಡಿಕೊಳ್ಳಲು ರಾಹುಲ್ ಗಾಂಧಿ ನೇತೃತ್ವದ ನಾಲ್ಕು ಮಂದಿ ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.

ಸೋನಿಯಾ ಗಾಂಧಿಯವರ ಆರೋಗ್ಯದ ಸ್ಥಿತಿಗತಿಯ ಬಗ್ಗೆ ನಾಳೆ ಕುಟುಂಬದ ಸದಸ್ಯರು ಹಾಗೂ ವೈದ್ಯರು ನೀಡುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಅನಾಮಧೇಯ ಮೂಲಗಳ ಪ್ರಕಾರ, ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿಯವರನ್ನು ನ್ಯೂಯಾರ್ಕ್ ಮೆಮೋರಿಯಲ್ ಸ್ಲೋನ್ ಕೆಟ್ಟೆರಿಂಗ್ ಕ್ಯಾನ್ಸರ್ ಸೆಂಟರ್‌ಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ಮಾಧ್ಯಮಗಳ ವರದಿಯ ಪ್ರಕಾರ, ನ್ಯೂಯಾರ್ಕ್ ಕ್ಯಾನ್ಸರ್ ಸೆಂಟರ್ ನಿರ್ದೇಶಕ ಡಾ.ದತ್ತಾತ್ರೇಯಡು ನೂರಿ, ಸೋನಿಯಾ ಗಾಂಧಿಯವರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ ಎಂದು ಪ್ರಕಟಿಸಿವೆ.

ಇದಕ್ಕಿಂತ ಮೊದಲು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಸುದ್ದಿಗಾರರೊಂದಿಗೆ ಮಾತನಾಡಿ, 64 ವರ್ಷ ವಯಸ್ಸಿನ ಸೋನಿಯಾ ಗಾಂಧಿ ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ

ಸೋನಿಯಾ ತಮ್ಮ ಗೈರುಹಾಜರಿಯಲ್ಲಿ ಪುತ್ರ ರಾಹುಲ್ ಗಾಂಧಿ, ಹಿರಿಯ ನಾಯಕರಾದ ಎ.ಕೆ.ಅಂಟನಿ, ಅಹ್ಮದ್ ಪಟೇಲ್ ಮತ್ತು ದ್ವಿವೇದಿ ಅವರ ನಾಲ್ಕು ಮಂದಿ ಸಮಿತಿಯನ್ನು ರಚಿಸಿದ್ದು, ಪಕ್ಷದ ಹೊಣೆಗಾರಿಕೆಯನ್ನು ನೋಡಿಕೊಳ್ಳಲಿದ್ದಾರೆ.

ಸಮಿತಿಯಲ್ಲಿ ಕೇವಲ ಒಬ್ಬರು ಹಿರಿಯ ಸಚಿವರಿದ್ದು, ಇತರ ಇಬ್ಬರು ನಾಯಕರು ಪಕ್ಷದ ಸಂಘಟನೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ.

ಸಮಿತಿಯಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಮತ್ತು ಕೇಂದ್ರ ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿಯವರಿಗೆ ಸ್ಥಾನ ನೀಡದಿರಲು ಕಾರಣವೇನು? ಎನ್ನುವ ಬಗ್ಗೆ ಸುದ್ದಿಗಾರರು ಕಾಂಗ್ರೆಸ್ ಪಕ್ಷದ ವಕ್ತಾರ ಮನೀಷ್ ತಿವಾರಿಯವರನ್ನು ಕೇಳಿದಾಗ, ದೀರ್ಘಾವಧಿಯಿಂದ ಪಕ್ಷಕ್ಕೆ ಸೇವೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಉಸ್ತುವಾರಿ, ಶಸ್ತ್ರಚಿಕಿತ್ಸೆ, ಕಾಂಗ್ರೆಸ್