ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಜನ ನಿಮಗೆ ಪಾಠ ಕಲಿಸ್ತಾರೆ ನೋಡಿ: ಕೇಂದ್ರಕ್ಕೆ ಸುಪ್ರೀಂ ಎಚ್ಚರಿಕೆ (Anna Hazare campaign | judicial appointments process | Supreme Court | India News | Latest India News)
PTI
ನ್ಯಾಯಾಂಗದಲ್ಲಿನ ನೇಮಕಗಳ ಪ್ರಕ್ರಿಯೆ ಬಗ್ಗೆ ಸಂಸದರು ಪ್ರಶ್ನಿಸಿದ ಮಾರನೇ ದಿನವೇ ಸುಪ್ರೀಂಕೋರ್ಟ್ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಸರಕಾರ ಮನಬಂದಂತೆ ವರ್ತಿಸಿದಲ್ಲಿ ಜನತೆ ತಕ್ಕ ಪಾಠ ಕಲಿಸುತ್ತಾರೆ ನೋಡಿ ಎಂದು ತರಾಟೆಗೆ ತೆಗೆದುಕೊಂಡಿದೆ.

ಕೆಲ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗಳು ನ್ಯಾಯಾಂಗದ ಗುಣಮಟ್ಟದಲ್ಲಿ ಕುಸಿತವಾಗುತ್ತಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಅಂತಹ ವ್ಯಕ್ತಿಗಳ ಹೇಳಿಕೆಗಳಲ್ಲಿ ಸತ್ಯಾಂಶವಿಲ್ಲ ಎಂದು ನ್ಯಾಯಮೂರ್ತಿಗಳಾದ ಜಿ.ಎಸ್.ಸಿಂಘ್ವಿ ಮತ್ತು ಎಚ್‌.ಎಲ್.ದತ್ತು ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿದೆ.

ಕೆಲ ದಿನಗಳ ಹಿಂದೆ ಜನಲೋಕಪಾಲ ಮಸೂದೆಗಾಗಿ ಅಣ್ಣಾ ಹಜಾರೆ ನೇತೃತ್ವದಲ್ಲಿ ಕೋಟ್ಯಾಂತರ ಜನತೆ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಮುಂಬರುವ ದಿನಗಳಲ್ಲಿ ಇಂತಹ ಮತ್ತಷ್ಟು ಪ್ರತಿಭಟನೆಗಳನ್ನು ಸರಕಾರ ಎದುರಿಸಬೇಕಾಗುತ್ತದೆ. ಸರಕಾರದ ಧೋರಣೆ ಇದೇ ರೀತಿ ಮುಂದುವರಿದಲ್ಲಿ, ಜನತೆ ತಕ್ಕಪಾಠ ಕಲಿಸಲಿದ್ದಾರೆ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

ಸರಕಾರಿ ಉದ್ಯೋಗಿಗಳ ವೇತನ ಶ್ರೇಣಿಯನ್ನು ಬಹಿರಂಗಪಡಿಸಿ ಎಂದು ಕೇಂದ್ರ ಸರಕಾರಕ್ಕೆ ಗುವಾಹಟಿ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ, ಸುಪ್ರೀಂಕೋರ್ಟ್‌ಗೆ ಸರಕಾರ ಮೇಲ್ಮನವಿ ಸಲ್ಲಿಸಿದ್ದರಿಂದ, ಸರಕಾರದ ವಿರುದ್ಧ ಸುಪ್ರೀಂಕೋರ್ಟ್ ಕಿಡಿಕಾರಿದೆ.

ಕೆಲ ದಿನಗಳ ಹಿಂದೆ ದೇಶಾದ್ಯಂತ ಸರಕಾರದ ವಿರುದ್ಧ ಜನತೆ ಆಕ್ರೋಶ್ ವ್ಯಕ್ತಪಡಿಸಿದ್ದಾರೆ. ಮುಂದಿನ 10 ವರ್ಷಗಳ ಅವಧಿಯಲ್ಲಿ ಜನತೆ ಸರಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಪಿ. ಮಲ್ಹೋತ್ರಾ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಸುಪ್ರೀಂಕೋರ್ಟ್, ಅಣ್ಣಾ ಹಜಾರೆ, ಕೇಂದ್ರ ಸರಕಾರ, ಪ್ರಧಾನಿ ಮನಮೋಹನ್ ಸಿಂಗ್, ಕನ್ನಡ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಭಾರತೀಯ ಸುದ್ದಿ