ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪ್ರಣಬ್, ಚಿದಂಬರಂ ಮಧ್ಯೆ ಭಿನ್ನಾಭಿಪ್ರಾಯಗಳಿಲ್ಲ: ಪ್ರಧಾನಿ (Manmohan Singh | Pranab Mukherjee | P Chidambaram | Rift | UPA II | 2G spectrum)
PTI
ಕೇಂದ್ರದ ವಿತ್ತಸಚಿವ ಪ್ರಣಬ್ ಮುಖರ್ಜಿ ಮತ್ತು ಗೃಹ ಸಚಿವ ಪಿ.ಚಿದಂಬರಂ ಮಧ್ಯೆಭಿನ್ನಾಭಿಪ್ರಾಯಗಳಿವೆ ಎನ್ನುವ ವರದಿಗಳನ್ನು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ತಳ್ಳಿಹಾಕಿದ್ದಾರೆ.

2ಜಿ ತರಂಗ ಗುಚ್ಚ ಹಗರಣಕ್ಕೆ ಸಂಬಂಧಿಸಿದಂತೆ ಯುಪಿಎ ಸಂಪುಟದಲ್ಲಿ ಇಬ್ಬರು ಹಿರಿಯ ಸಚಿವರ ಮಧ್ಯೆ ಭಿಕ್ಕಟ್ಟು ಎದುರಾಗಿವೆ ಎನ್ನುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ, ಉಭಯರ ಮಧ್ಯೆ ಭಿನ್ನಾಭಿಪ್ರಾಯಗಳಿವೆ ಎಂದು ನಾನು ಭಾವಿಸಿಲ್ಲ ಎಂದು ತಿಳಿಸಿದ್ದಾರೆ.

ಕೇಂದ್ರದ ವಿತ್ತಸಚಿವರಾಗಿ ಪಿ.ಚಿದಂಬರಂ ಉತ್ತಮ ಕಾರ್ಯನಿರ್ವಹಿಸಿ ನನ್ನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದೀಗ ಗೃಹ ಸಚಿವರಾಗಿಯೂ ನನ್ನ ಮನಸ್ಸಿಗೆ ತೃಪ್ತಿ ತರುವಂತೆ ಕಾರ್ಯನಿರ್ವಹಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

2ಜಿ ಹಗರಣದ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, 2ಜಿ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ, ಹೇಳಿಕೆ ನೀಡುವುದು ಸೂಕ್ತವಾಗದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರದ ಗೃಹ ಸಚಿವ ಪಿ.ಚಿದಂಬರಂ ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ ಸೇರಿದಂತೆ ಇತರ ವಿಪಕ್ಷಗಳು ಒತ್ತಾಯಿಸಿವೆ.

ಅಂದಿನ ವಿತ್ತಸಚಿವ ಪಿ.ಚಿದಂಬರಂ ಮಾಜಿ ಟೆಲಿಕಾಂ ಸಚಿವ ರಾಜಾ ಅವರಿಗೆ ಕಡಿವಾಣ ಹಾಕಿ 2ಜಿ ತರಂಗ ಗುಚ್ಚ ಹಂಚಿಕೆಯನ್ನು ಮತ್ತಷ್ಟು ಪಾರದರ್ಶಕವಾಗಿ ಮಾಡಬಹುದಿತ್ತು. ಪ್ರಧಾನಿ ಕಚೇರಿಗೆ ಕಳುಹಿಸುವ ಮೊದಲೇ ಚಿದಂಬರಂ ಅಂತಿಮ ನಿರ್ಧಾರ ತೆಗೆದುಕೊಂಡಿದ್ದರು ಎಂದು ಪ್ರಣಬ್ ಮುಖರ್ಜಿ ತಂಡ ಅಸಮಧಾನ ವ್ಯಕ್ತಪಡಿಸಿದೆ.

ಅಮೆರಿಕದಿಂದ ಭಾರತಕ್ಕೆ ಮರಳುವವರೆಗೆ ಯಾವುದೇ ರೀತಿಯ ಹೇಳಿಕೆ ನೀಡದಂತೆ ಗೃಹ ಸಚಿವ ಪಿ.ಚಿದಂಬರಂ ಅವರಿಗೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಮನಮೋಹನ್ ಸಿಂಗ್, ಪ್ರಣಬ್ ಮುಖರ್ಜಿ, ಪಿಚಿದಂಬರಂ, ಯುಪಿಎ, 2ಜಿ ಹಗರಣ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ