ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » 2ಜಿ ಹಗರಣ: ಸೋನಿಯಾ ಟೀಚರ್‌ಗೆ ಪಾಠ ಒಪ್ಪಿಸಿದ ಪ್ರಣಬ್ (2G Scam | Sonia gandhi | Pranab Mukherjee | Finance Ministry | Manmohan Singh | P Chidambaram | Congress)
PTI
2ಜಿ ತರಂಗ ಗುಚ್ಚ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತಸಚಿವ ಪ್ರಣಬ್ ಮುಖರ್ಜಿ, ಇಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭ್ಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

2ಜಿ ಹಗರಣದ ವಿವಾದಕ್ಕೆ ಸಂಬಂಧಿಸಿದಂತೆ ವಿತ್ತಸಚಿವ ಪ್ರಣಬ್ ಮುಖರ್ಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದ ಒಂದು ದಿನದ ನಂತರ ಸೋನಿಯಾ ಭೇಟಿಗೆ ತೆರಳುತ್ತಿದ್ದಾರೆ.

PTI
ಪ್ರಣಬ್ ಅವರನ್ನು ಭೇಟಿಯಾಗುವ ಮುನ್ನ ಸೋನಿಯಾ ಗಾಂಧಿ, ರಕ್ಷಣಾ ಸಚಿವ ಎಕೆ.ಆಂಟನಿ ಮತ್ತು ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರೊಂದಿಗೆ ಚರ್ಚೆ ನಡೆಸಿಲಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಕಳೆದ ಮೂರು ದಿನಗಳ ಅವಧಿಯಲ್ಲಿ ಪ್ರಣಬ್ ಮುಖರ್ಜಿ ಸೋನಿಯಾ ಗಾಂಧಿಯವರನ್ನು ಎರಡು ಬಾರಿ ಭೇಟಿ ಮಾಡಿ ಚರ್ಚಿಸಿದ್ದಾರೆ. ವಾರಂದ ಅರಂಭದಲ್ಲಿ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಹಾಗೂ ನಿನ್ನೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಕೂಡಾ ಸೋನಿಯಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಿದಂಬರಂ ಮನಸ್ಸು ಮಾಡಿದ್ದಲ್ಲಿ 2ಜಿ ಹಗರಣವನ್ನು ತಡೆಯಬಹುದಿತ್ತು ಎಂದು ಪ್ರಣಬ್ ಮುಖರ್ಜಿ ನೇತೃತ್ವದ ವಿತ್ತಸಚಿವಾಲಯ ಪ್ರಧಾನಿ ಕಾರ್ಯಾಲಯಕ್ಕೆ ಬರೆದ ಪತ್ರ, ಇದೀಗ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: 2ಜಿ ಹಗರಣ, ಸೋನಿಯಾ ಗಾಂಧಿ, ಪ್ರಣಬ್ ಮುಖರ್ಜಿ, ವಿತ್ತಸಚಿವಾಲಯ, ಮನಮೋಹನ್ ಸಿಂಗ್, ಪಿಚಿದಂಬರಂ, ಕಾಂಗ್ರೆಸ್