ಸರ್ವಜ್ಞ | ಪ್ರಚಲಿತ | ವಿಮಾನ ದುರಂತ | ರಾಷ್ಟ್ರೀಯ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕಾಂಗ್ರೆಸ್ ರಾಷ್ಟ್ರಾಧ್ಯಕ್ಷರಾಗಲು ರಾಹುಲ್ ಸಿದ್ಧ: ದಿಗ್ವಿಜಯ್ ಸಿಂಗ್ (Rahul Gandhi | Congress | Digvijay Sing | Prime Minister | President)
PTI
ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸಿದ್ಧವಾಗಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಹೊರಲು ರಾಹುಲ್ ಸಿದ್ದವಾಗಿದ್ದಾರೆ. ಈ ವಿಷಯದ ಬಗ್ಗೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಪರಸ್ಪರ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಅಂಗವಾಗಿ ರಾಹುಲ್ ಗಾಂಧಿ 'ಮಿಷನ್ 2012' ಎನ್ನುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ದಿಗ್ವಿಜಯ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅದೇ ವೇಳೆ ರಾಹುಲ್ ಗಾಂಧಿಗೆ ಹೆಚ್ಚಿನ ಜವಾಬ್ದಾರಿ ನೀಡುವ ಬಗ್ಗೆ ಪ್ರಧಾನಿ ಮನಮೋಹನ್ ಸಿಂಗ್ ಕೂಡಾ ಒಪ್ಪಿಗೆ ಸೂಚಿಸಿದ್ದಾರೆ.

ಇದು ಪಕ್ಷದ ವಿಷಯ. ನಾನು ಪಕ್ಷದ ಬಗ್ಗೆ ಮಾತನಾಡುವುದಿಲ್ಲ. ಒಂದು ವೇಳೆ ರಾಹುಲ್‌ಗೆ ಹೆಚ್ಚಿನ ಹೊಣೆ ನೀಡಿದಲ್ಲಿ ಅದನ್ನು ಸ್ವಾಗತಿಸುವುದಾಗಿ ಹೇಳಿಕೆ ನೀಡಿದ್ದಾರೆ.

ಏತನ್ಮಧ್ಯೆ, ರಾಹುಲ್‌ಗೆ ಸಚಿವ ಸಂಪುಟ ಸೇರುವಂತೆ ರಾಹುಲ್ ಅವರನ್ನು ಒತ್ತಾಯಿಸಿದ್ದರೂ ಅದಕ್ಕೆ ಅವರು ಸಮ್ಮತಿ ಸೂಚಿಸಲಿಲ್ಲ ಎಂದು ಪ್ರಧಾನಿ ಸಿಂಗ್ ಹೇಳಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ರಾಹುಲ್ ಗಾಂಧಿ, ಕಾಂಗ್ರೆಸ್, ದಿಗ್ವಿಜಯ್ ಸಿಂಗ್, ಪ್ರಧಾನಿ, ಕಾಂಗ್ರೆಸ್ ಅಧ್ಯಕ್ಷ