ಸರ್ವಜ್ಞ | ಪ್ರಚಲಿತ | ವಿಮಾನ ದುರಂತ | ರಾಷ್ಟ್ರೀಯ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » 2ಜಿ ಹಗರಣದಲ್ಲಿ ಚಿದಂಬರಂ ಭಾಗಿಯಾಗಿಲ್ಲ; ಸಿಬಲ್ ಸ್ಪಷ್ಟನೆ (2G Scam | Kapil Sibal | p Chidambaram | nda | a Raja | Latest News in Kannada)
PR
2ಜಿ ಹಗರಣದಲ್ಲಿ ಗೃಹಸಚಿವ ಪಿ.ಚಿದಂಬರಂ ಅವರು ಭಾಗಿಯಾಗಿರುವ ಆರೋಪವನ್ನು ತಳ್ಳಿಹಾಕಿರುವ ದೂರಸಂಪರ್ಕ ಸಚಿವ ಕಪಿಲ್ ಸಿಬಲ್, ವಿನಾಕಾರಣ ಎನ್‌ಡಿಎ ಸದಸ್ಯರು ಚಿದಂಬರಂ ಹೆಸರಿಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆಂದು ಕಿಡಿಕಾರಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

2ಜಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ದೂರಸಂಪರ್ಕ ಸಚಿವ ಎ.ರಾಜ, ಆ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಪಿ.ಚಿದಂಬರಂ ಅವರೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ ಎಂದಿದ್ದಾರೆ.

ಅಲ್ಲದೆ, ಜನವರಿ 10, 2008 ರಂದು 2ಜಿ ತರಂಗಾಂತರ ಹಂಚಿಕೆಯ ಕುರಿತು ದೂರಸಂಪರ್ಕ ಇಲಾಖೆಯಿಂದ ನೀಡಲಾಗಿದೆ ಎನ್ನಲಾಗಿರುವ ಪತ್ರದ ಕುರಿತು ಹಣಕಾಸು ಇಲಾಖೆಗೆ ಯಾವುದೇ ಮಾಹಿತಿ ಇಲ್ಲ ಎಂದು ದಾಖಲೆಗಳು ಸ್ಪಷ್ಟಪಡಿಸುತ್ತಿರುವುದಾಗಿ ತಿಳಿಸಿದ್ದಾರೆ.

ಹಣಕಾಸು ಸಚಿವರಾಗಿದ್ದ ಪಿ.ಚಿದಂಬರಂ ಸೇರಿದಂತೆ ಇಲಾಖೆಯ ಯಾವೊಬ್ಬ ಅಧಿಕಾರಿಯೂ 2ಜಿ ಹಗರಣದಲ್ಲಿ ತಪ್ಪೆಸಗಿಲ್ಲ ಎಂದು ಪುನರುಚ್ಚರಿಸಿದ್ದಾರೆ.
ಇವನ್ನೂ ಓದಿ
WebduniaWebdunia