ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವಾಗ್ವಾದ : ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ
ಕಾಂಗ್ರೆಸ್-ಬಿಜೆಪಿಗಳ ನಡುವೆ ನಡೆದ ಘರ್ಷಣೆ ತೀವ್ರ ಸ್ವರೂಪವನ್ನು ಪಡೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹೊನ್ನಾಳಿ ಪಟ್ಟಣದಲ್ಲಿ ನಿಷೇಧಾಜ್ಞೆಯನ್ನು ಇಂದು ಕೂಡ ಮುಂದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಮಾವೇಶವನ್ನು ರದ್ದು ಪಡಿಸಲಾಗಿದೆ.

ಕ್ಷುಲಕ ಕಾರಣಕ್ಕಾಗಿ ನಡೆದ ಘರ್ಷಣೆ ವಿಕೋಪಕ್ಕೆ ತಿರುಗಿದ್ದು, ಬಿಜೆಪಿ ಮಾಜಿ ಶಾಸಕ ರೇಣುಕಾಚಾರ್ಯ ಅವರ ಮನೆಯ ಮೇಲೆ ದಾಳಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಗಾಜುಗಳನ್ನು ಪುಡಿ ಮಾಡಿ, ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ ಅಲ್ಲದೆ, ಈ ಘರ್ಷಣೆಯಿಂದ ಒಂದು ಕಾರು ಸಂಪೂರ್ಣ ಸುಟ್ಟು ಹೋಗಿದೆ.

ಇಂದು(ಮಂಗಳವಾರ) ಹೊನ್ನಾಳಿಯಲ್ಲಿ ಬೃಹತ್ ಬಿಜೆಪಿ ಸಮಾವೇಶವನ್ನು ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ಆಯೋಜಿಸಲು ತಯಾರಿ ನಡೆಸಲಾಗಿತ್ತು. ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ಡಿ.ವಿ. ಸದಾನಂದಗೌಡ ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸಲಾಗಿತ್ತು.

ಈ ಸಂದರ್ಭದಲ್ಲಿ ಅಲ್ಲಿಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದೇ ಈ ಘಟನೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ.

ಕೂಡಲೇ ಸ್ಥಳಕ್ಕಾಗಾಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು 144 ಸೆಕ್ಷನ್ ಜಾರಿ ಮಾಡಿದ್ದು, ಪರಿಸ್ಥಿತಿ ಸಂಜೆಯ ವೇಳೆಗೆ ಸ್ವಲ್ಪ ಮಟ್ಟಿನ ಸುಧಾರಣೆ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.
ಮತ್ತಷ್ಟು
ಹೊಗೇನಕಲ್ ವಿವಾದ: ಮುಂದುವರಿದ ಪ್ರತಿಭಟನೆ
ಕಾಯಕಯೋಗಿಗೆ ಹುಟ್ಟುಹಬ್ಬದ ಸಂಭ್ರಮ
ಚುನಾವಣಾಧಿಕಾರಿಯಾಗಿ ವಿದ್ಯಾಶಂಕರ್ ಅಧಿಕಾರ ಸ್ವೀಕಾರ
ಕಿಲ್ಲರ್ ಕವಳ ಸಿಸಿಬಿ ಪೊಲೀಸರ ಕಸ್ಟಡಿಗೆ
ದಲಿತರ ಮತಕ್ಕಾಗಿ ಶ್ರಮಿಸುತ್ತಿರುವ ಕಾಂಗ್ರೆಸ್
ಉಗ್ರರು ಶಸ್ತ್ರಾಸ್ತ್ರ ಪಡೆಯಲು ಅಡ್ಡಿಯಾದ ಕೊಲೆ