ಎಪ್ರಿಲ್ 10ರಂದು ಕರ್ನಾಟಕ ಬಂದ್‌ಗೆ ಕರೆ
|
|
|
ಬೆಂಗಳೂರು, ಮಂಗಳವಾರ, 1 ಏಪ್ರಿಲ್ 2008( 19:46 IST )
|
|
|
|
|
|
|
|
ಹೊಗೇನಕಲ್ ಜಲ ಯೋಜನೆ ಕುರಿತಂತೆ ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಹೇಳಿಕೆ ವಿರುದ್ಧ ಎ.10ರಂದು ಕರ್ನಾಟಕ ಬಂದ್‌ಗೆ ಕನ್ನಡ ಪರ ಸಂಘಟನೆಗಳು ಮಂಗಳವಾರ ಕರೆ ನೀಡಿವೆ. ಹೊಗೇನಕಲ್ ಯೋಜನೆಯನ್ನು ಮುಂದುವರಿಸುವುದಾಗಿ ಎಂ.ಕರುಣಾನಿಧಿ ನೀಡಿದ ಹೇಳಿಕೆಯಿಂದ ವಿವಾದದ ಕಿಡಿ ಸ್ಫೋಟಿಸಿದೆ.
ಅಖಿತ ಕರ್ನಾಟಕ ಗಡಿ ಹೋರಾಟ ಸಮಿತಿ ಒಕ್ಕೂಟದ ಅಡಿಯಲ್ಲಿ ಬರುವ ಕನ್ನಡ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡುವಂತೆ ಎಲ್ಲ ಪಕ್ಷಗಳಿಗೆ ಮನವಿ ಸಲ್ಲಿಸಿದ್ದಾರೆಂದು ಸಮಿತಿ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಗೇನಕಲ್ ಯೋಜನೆಯ ಕಾಮಗಾರಿ ನಿಲ್ಲಿಸುವಂತೆ ತಮಿಳುನಾಡು ಸರ್ಕಾರಕ್ಕೆ ಒತ್ತಾಯಿಸಲು ಆ ದಿನದಂದು ರಾಲಿ ಆಯೋಜಿಸಲಾಗಿದೆ. ಕರ್ನಾಟಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕರ್ನಾಟಕ ರಕ್ಷಣಾ ವೇದಿಕೆ, ದಲಿತ ಸಂಘರ್ಷ ಸಮಿತಿ, ಕನ್ನಡಸೇನೆ ಮುಂತಾದ ಸಂಘಟನೆಗಳ ಪ್ರತಿನಿಧಿಗಳು ಪ್ರತಿಭಟನಾ ಕಾರ್ಯಕ್ರಮಗಳನ್ನು ರೂಪಿಸಲು ಮಂಗಳವಾರ ಕರೆದಿದ್ದ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು.
|
|
|
|