ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕರುಣಾ ಪುತ್ರಿಗೆ ವಿಶೇಷ ಭದ್ರತೆ
ಬೆಂಗಳೂರು: ತಮಿಳು ನಾಡು ಕೈಗೆತ್ತಿಕೊಂಡಿರುವ ಹೊಗೇನಕಲ್ ಯೋಜನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯ ಕಾರಣ ಬೆಂಗಳೂರಿನಲ್ಲಿ ವಾಸಿಸುತ್ತಿರುವ ತಮಿಳು ನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಪುತ್ರಿ ಸೆಲ್ವಿ ಅವರಿಗೆ ಕರ್ನಾಟಕ ಪೊಲೀಸರು ವಿಶೇಷ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ರಾಮ ಸೇತು ವಿವಾದಕ್ಕೆ ಸಂಬಂಧಿಸಿದಂತೆ ಕರುಣಾನಿಧಿ ರಾಮನ ವಿರುದ್ಧ ನೀಡಿದ ಅಕ್ಷೇಪಣಾರ್ಹ ಹೇಳಿಕೆಯ ನಂತರ ಸೆಲ್ವಿ ಮನೆಯ ಮೇಲೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಬೆಂಗಳೂರು ಪೊಲೀಸ್ ಕಮಿಷನರ್ ಎನ್ ಅಚ್ಯುತ್ ರಾವ್ ಅವರು ಈ ಹಿಂದೆ ನಡೆದ ಅಹಿತಕಾರಿ ಘಟನೆಯ ಕಾರಣ ಮುನ್ನೆಚ್ಚರಿಕೆಯ ಕ್ರಮವಾಗಿ ಸೆಲ್ವಿ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ಹೇಳಿದರು.

ತಮಿಳು ಸಂಗಮ್ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತ ಬಸವರಾಜ್ ಎನ್ನುವವನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.
ಮತ್ತಷ್ಟು
ಖರ್ಗೆ ನೇತೃತ್ವದಲ್ಲೇ ಚುನಾವಣೆ :ಕಾಂಗ್ರೆಸ್ ಇಂಗಿತ
ಮುಖಂಡರ ಸೇರ್ಪಡೆಯಿಂದ ಪಕ್ಷದ ಬಲವರ್ಧನೆ: ಖರ್ಗೆ
ಅನುಮತಿಯಿಲ್ಲದ ಹೊಗೇನಕಲ್ ಯೋಜನೆ 'ಅಕ್ರಮ'
ಎಪ್ರಿಲ್ 10ರಂದು ಕರ್ನಾಟಕ ಬಂದ್‌ಗೆ ಕರೆ
ಹೈಕಮಾಂಡ್ ಸೂಚಿದರೆ ಚುನಾವಣೆಗೆ ಸ್ಪರ್ಧೆ: ಕೃಷ್ಣ
ವಾಗ್ವಾದ : ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ