ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಮೆರಿಕದ ಒತ್ತಡಕ್ಕ ಮಣಿದಿರುವ ಕೇಂದ್ರ: ಆಡ್ವಾಣಿ
ಪೋಕ್ರಾನ್ ಅಣುಶಕ್ತಿ ಪರೀಕ್ಷಾ ದಿನಾಚರಣೆಯನ್ನು ಅಮೇರಿಕಾದ ಒತ್ತಡದಿಂದ ಕಾಂಗ್ರೆಸ್ ಕೈಬಿಟ್ಟಿರುವುದು ದುರದೃಷ್ಟಕರ ಎಂದು ಮಾಜಿ ಉಪಪ್ರಧಾನಿ ಎಲ್.ಕೆ. ಅಡ್ವಾಣಿ ವಿಷಾದಿಸಿದ್ದಾರೆ.

ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವದಲ್ಲಿ ಭಾರತಕ್ಕೆ ಗೌರವ ತಂದುಕೊಟ್ಟ ಪೋಕ್ರಾನ್ ಅಣುಶಕ್ತಿ ಪರೀಕ್ಷಾ ದಶಮಾನೋತ್ಸವವನ್ನು ವಿಜೃಂಭನೆಯಿಂದ ಆಚರಿಸಬೇಕಿತ್ತು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅಡ್ವಾಣಿ, 2004ರಿಂದ ದೇಶದಲ್ಲಿ ಕಾಂಗ್ರೆಸ್ ಪ್ರಭಾವ ಕುಂಠಿತವಾಗುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಅದು ಸ್ಪಷ್ಟವಾಗಲಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನದ ಸಮೀಕ್ಷೆ ಹಾಗೂ ಮತದಾರರ ಒಲವು ಗಮನಿಸಿದರೆ ಬಿಜೆಪಿಗೆ ಬಹುಮತ ನಿಶ್ಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎನ್‌ಡಿಎ ಮೈತ್ರಿಕೂಟ ಪಕ್ಷಗಳ ಅತಿಯಾದ ಆತ್ಮವಿಶ್ವಾಸದಿಂದಾಗಿ ನಾವು ಅಧಿಕಾರ ಕಳೆದುಕೊಳ್ಳಬೇಕಾಯಿತು ಎಂದು ಅವರು ತಿಳಿಸಿದರು.
ಮತ್ತಷ್ಟು
ಭಯೋತ್ಪಾದನೆಗೆ ಕಾಂಗ್ರೆಸ್ ಕಾರಣ: ಡಿ.ವಿ
ಬೆಂಗಳೂರು ರಾಮನಗರಗಳಲ್ಲಿ ಮರು ಮತದಾನ
ಸ್ಪೋಟ : ಲಷ್ಕರ್, ಸಿಮಿ ಕೈವಾಡದ ಶಂಕೆ
953 ಅಭ್ಯರ್ಥಿಗಳ ಭವಿಷ್ಯ ದಾಖಲು
ಮತದಾನದದ ಜೊತೆ ಅಕ್ರಮ, ಆಮಿಷಗಳ ಆರಂಭ
ಈ ಬಾರಿಯೂ ನಾನೇ ಮುಖ್ಯಮಂತ್ರಿ: ಕುಮಾರಸ್ವಾಮಿ