ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪ್ರಯಾಣದರ ಹೆಚ್ಚಳವಿಲ್ಲ: ಅಶೋಕ್  Search similar articles
ತೈಲ ಬೆಲೆ ಏರಿಕೆಯಿಂದಾಗಿ ರಾಜ್ಯ ಸಾರಿಗೆ ಸಂಸ್ಥೆ ಪ್ರಯಾಣ ದರವನ್ನು ಹೆಚ್ಚಿಸಲಿದೆ ಎಂಬ ಉಹಾಪೋಹಾಗಳಿಗೆ ರಾಜ್ಯ ಸಾರಿಗೆ ಸಚಿವರು ತೆರೆ ಎಳೆದಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ರಾಜ್ಯ ಸಾರಿಗೆ ಸಂಸ್ಥೆ ಪ್ರಯಾಣ ದರವು ಶೇ.18ರಷ್ಟು ಹೆಚ್ಚಳವಾಗಲಿದೆ ಎಂಬುದು ಸತ್ಯಕ್ಕೆ ದೂರವಾಗಿದೆ ಎಂದು ತಿಳಿಸಿದ್ದಾರೆ.

ತೈಲ ಬೆಲೆ ಏರಿಕೆಯಿಂದ ಪ್ರಯಾಣದರದಲ್ಲಿ ಯಾವುದೇ ರೀತಿಯ ಹೆಚ್ಚಳವಿಲ್ಲ. ಸಾರಿಗೆ ಸಂಸ್ಥೆಗೆ ಇದರಿಂದ ಸುಮಾರು 120 ಕೋಟಿ ರೂ. ನಷ್ಟ ಸಂಭವಿಸಬಹುದೆಂದು ಅಂದಾಜು ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆಯಲ್ಲಿ ಶೀಘ್ರವೇ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಪ್ರಯಾಣ ದರ ಹೆಚ್ಚಿಸುವ ಬದಲಾಗಿ ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಲಿದ್ದು, ಸಾರಿಗೆ ಸಂಸ್ಥೆಗೆ ಆಗಬಹುದಾದ ನಷ್ಟದ ಕುರಿತು ಮುಂಜಾಗ್ರತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಮತ್ತಷ್ಟು
ಜಂಟಿ ಸದನ ಸಮಿತಿಗೆ ಖರ್ಗೆ ಆಗ್ರಹ
ಬಜೆಟ್‌ನಲ್ಲಿ ತೆರಿಗೆ ಹೊರೆ ಇಲ್ಲ: ಯಡಿಯೂರಪ್ಪ
ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ
ರಸ್ತೆಗಿಳಿಯಲು ಕಾತರವಾಗಿರುವ 'ಚೀತಾ'ಗಳು
ಮಂಗಳೂರು: ಮಿಫ್ಟ್‌ನಿಂದ ಪತ್ತೆದಾರಿ ಕೋರ್ಸ್
ಬಿಜೆಪಿ ಸೇರ್ಪಡೆ ಊಹಾಪೋಹಕ್ಕೆ ಸಿದ್ದು ತೆರೆ