ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಸಗೊಬ್ಬರ: ಕೇಂದ್ರ ಮೇಲೆ ಗೂಬೆ ಕೂರಿಸಿದ ಬಿಜೆಪಿ  Search similar articles
ರಾಜ್ಯದಲ್ಲಿ ರಸಗೊಬ್ಬರ ಅಭಾವಕ್ಕೆ ಕೇಂದ್ರ ಸರಕಾರದ ನೀತಿಗಳೇ ಕಾರಣ ಎಂದು ಆರೋಪಿಸಿ, ರಾಜ್ಯ ಬಿಜೆಪಿ ಘಟಕದ ಕಾರ್ಯಕರ್ತರು ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರಿನಲ್ಲಿ ವಿಧಾನಪರಿಷತ್ ಸದಸ್ಯ ಸಿದ್ದರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಕೇಂದ್ರ ಸರಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ರಾಷ್ಟ್ರಪತಿ ಆಳ್ವಿಕೆಯಲ್ಲಿ ಜಾರಿಗೆ ತಂದಿರುವ ನೀತಿಗಳೇ ರಸಗೊಬ್ಬರದ ಕೊರತೆಗೆ ಕಾರಣ. ರಾಜ್ಯದ ಬಗ್ಗೆ ಕೇಂದ್ರ ತೋರಿದ ಮಲತಾಯಿ ಧೋರಣೆಯಿಂದಾಗಿ ಇಂದು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಿದರು.

ಈ ಮಧ್ಯೆ ತುಮಕೂರಿನಲ್ಲಿಯೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಸಗೊಬ್ಬರ ಅಭಾವಕ್ಕೆ ಕೇಂದ್ರ ಸರಕಾರವೇ ನೇರ ಹೊಣೆ. ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ರಸಗೊಬ್ಬರ ಪತ್ತೆ
ರಸಗೊಬ್ಬರಕ್ಕಾಗಿ ರೈತರು ಪ್ರತಿಭಟನೆ ನಡೆಸುತ್ತಿರುವಂತೆ ಇತ್ತ, ಮಂಡ್ಯದ ನಾಗಮಂಗಲದಲ್ಲಿ ಸುಮಾರು 13 ಲಕ್ಷ ರೂ. ಮೌಲ್ಯದ 820 ಚೀಲಗಳು ಪತ್ತೆಯಾಗಿವೆ. ಕೃಷಿ ಇಲಾಖೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಗಮಂಗಲದ ಫಾರ್ಮ ಹೌಸ್ ಮೇಲೆ ಧಾಳಿ ನಡೆಸಿ, ಸಪ್ತಗಿರಿ ಆಗ್ರೋ ಏಜೆನ್ಸಿ ಮಾಲೀಕ ರಮೇಶ್ ಎಂಬಾತನನ್ನು ಬಂಧಿಸಿದ್ದಾರೆ.
ಮತ್ತಷ್ಟು
ಡೇರಾ ಸಚ್ಚಾ ನಗರಕ್ಕೆ ಆಗಮನ
ಪ್ರಯಾಣದರ ಹೆಚ್ಚಳವಿಲ್ಲ: ಅಶೋಕ್
ಜಂಟಿ ಸದನ ಸಮಿತಿಗೆ ಖರ್ಗೆ ಆಗ್ರಹ
ಬಜೆಟ್‌ನಲ್ಲಿ ತೆರಿಗೆ ಹೊರೆ ಇಲ್ಲ: ಯಡಿಯೂರಪ್ಪ
ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ
ರಸ್ತೆಗಿಳಿಯಲು ಕಾತರವಾಗಿರುವ 'ಚೀತಾ'ಗಳು