ಹಾಸನದ ಗಂಡಸಿಯ ಮಾಜಿ ಶಾಸಕ ನಂಜೇಗೌಡ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ನ್ಯಾಯಾಲಯ ಶನಿವಾರ ಎಂಟು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ, 11 ಮಂದಿಯನ್ನು ಆರೋಪ ಮುಕ್ತಗೊಳಿಸಿದೆ.
ಸುಮಾರು 14 ವರ್ಷಗಳ ಹಿಂದೆ ಕಾಂಗ್ರೆಸ್ ಶಾಸಕರಾಗಿದ್ದ ನಂಜೇಗೌಡ ಅವರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 21ಮಂದಿಯ ವಿರುದ್ಧ ಆರೋಪ ಪಟ್ಟಿ ದಾಖಲಿಸಿಕೊಳ್ಳಲಾಗಿತ್ತು.
ಇದೀಗ ಸುದೀರ್ಘವಾಗಿ 14ವರ್ಷಗಳ ಕಾಲ ಹಾಸನದ ಸಿವಿಲ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ, ಶನಿವಾರದಂದು ನ್ಯಾಯಾಧೀಶರು 8ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದರೆ, 11 ಮಂದಿಯನ್ನು ಆರೋಪಮುಕ್ತಗೊಳಿಸಿದ್ದಾರೆ. ಉಳಿದ ಇಬ್ಬರು ಆರೋಪಿತರು ವಿಚಾರಣೆಯ ವೇಳೆಯಲ್ಲಿ ಮೃತಪಟ್ಟಿದ್ದರು.
ಹತ್ಯೆ ಪ್ರಕರಣದಲ್ಲಿ ಎಂಟು ಮಂದಿಗೆ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಿರುವ ಕುರಿತು ದಿ.ನಂಜೇಗೌಡರ ಮನೆಯವರು ತುಂಬಾ ಹರ್ಷ ವ್ಯಕ್ತಪಡಿಸಿದ್ದಾರೆ. ಆದರೆ ಆರೋಪಿತರ ಕುಟುಂಬಿಕರು ಮಾತ್ರ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
|