ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವಿಮಾನ ನಿಲ್ದಾಣದ ಹೆಚ್ಚುವರಿ ಭೂಮಿ ಹರಾಜಿಗಿಲ್ಲ  Search similar articles
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ವಶಪಡಿಸಿಕೊಂಡಿರುವ ಹೆಚ್ಚುವರಿ ಭೂಮಿಯನ್ನು ಹರಾಜು ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಜೆಡಿಎಸ್‌ನ ರೇವಣ್ಣ ಅವರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡುತ್ತಿದ್ದ ಅವರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆಗೆ ಒಟ್ಟು 4,391 ಎಕರೆಗಳನ್ನು ವಶಪಡಿಸಿಕೊಂಡಿದ್ದು, ಇದರಲ್ಲಿ 3982 ಎಕರೆ ಜಾಗವನ್ನು ನಿಲ್ದಾಣಕ್ಕೆ ಬಳಸಿಕೊಳ್ಳಲಾಗಿದೆ. ಹೆಚ್ಚುವರಿಯಾಗಿರುವ 409 ಎಕರೆ ಜಮೀನನ್ನು ಖಾಸಗಿಯವರಿಗೆ ಮಾರಾಟ ಮಾಡುವ ಉದ್ದೇಶ ಇಲ್ಲ ಎಂದು ತಿಳಿಸಿದರು.

ಹೆಚ್ಚುವರಿಯಾದ ಜಮೀನಿನಲ್ಲಿ ಸುಮಾರು 83 ಎಕರೆಯನ್ನು ಬಿಎಂಟಿಸಿಗೆ, ಎಂಎಸ್ಐಎಲ್, ಹವಾಮಾನ ಇಲಾಖೆ, ಕಸ್ಟಮ್ಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಪ್ರತಿ ಎಕರೆಗೆ 3 ಕೋಟಿಯಂತೆ ನೀಡಲಾಗುವುದು ಎಂದರು. ಸರ್ಕಾರಿ ಸಂಸ್ಥೆಗಳಿಗೆ ನೀಡಿ ಉಳಿಯುವ ಬಾಕಿ ಜಮೀನನ್ನು ಗುತ್ತಿಗೆ ಆಧಾರದ ಮೇಲೆ ಖಾಸಗಿಯವರಿಗೆ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಮತ್ತಷ್ಟು
ಶೀಘ್ರವೆ ಬರಪೀಡಿತ ಜಿಲ್ಲೆಗಳ ಘೋಷಣೆ
'ವಿನಿವಿಂಕ್ ಶಾಸ್ತ್ರಿ' ಆಸ್ತಿ ಹಂಚಲು ಹೈಕೋರ್ಟ್ ಆದೇಶ
ವಿಧಾನಸೌಧ ಸುತ್ತ ನಿಷೇಧಾಜ್ಞೆ
ಮದ್ಯಪಾನ ವಿರೋಧಿ ಸಮಿತಿ ಅಧ್ಯಕ್ಷನ ಕೊಲೆ
ಯಡಿಯೂರಪ್ಪ ವಿಮಾನಕ್ಕೆ ಹುಸಿ ಬಾಂಬ್ ಕರೆ
ಬೆಂಗಳೂರು: ವರುಣನ ಆರ್ಭಟಕ್ಕೆ 2 ಬಲಿ