ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕುವಲ್ಲಿ ತಮಿಳುನಾಡಿಗರು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಖ್ಯಾತ ಸಂಶೋಧಕ ಡಾ.ಚಿದಾನಂದಮೂರ್ತಿ ಆರೋಪಿಸಿದ್ದಾರೆ.
ಶಾಸ್ತ್ರೀಯ ಭಾಷೆಯಾಗಿ ಕನ್ನಡ ವರದಿ ಮತ್ತು ಇತ್ತೀಚಿನ ಬೆಳವಣಿಗೆ ಕುರಿತು ಮಾತನಾಡಿದ ಅವರು, ಪ್ರತಿ ಹಂತದಲ್ಲೂ ತಮಿಳುನಾಡಿಗರು ಹಸ್ತಕ್ಷೇಪ ಮಾಡುತ್ತಿರುವುದರಿಂದ ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನ-ಮಾನಕ್ಕೆ ವಿಳಂಬವಾಗುತ್ತಿದೆ. ಕನಿಷ್ಠ ಒಂದು ಸಾವಿರ ವರ್ಷ ಇತಿಹಾಸ ಇರುವ ಕನ್ನಡ ಭಾಷೆಗೆ ಸೂಕ್ತ ಸ್ಥಾನಮಾನ ದೊರಕಿಲ್ಲ ಎಂದು ಅವರು ದೂರಿದರು.
ಭಾಷೆಗೆ ಸ್ವಂತಿಕೆ ಹಾಗೂ ಮೌಲ್ಯ ಮತ್ತಿತರ ಮಾನದಂಡಗಳ ಸಮಗ್ರ ವರದಿಯನ್ನು ಪ್ರಧಾನಮಂತ್ರಿಗಳಿಗೆ ಸಲ್ಲಿಸಲಾಗಿದೆ. ಆ.8ರಂದು ನಡೆಯುವ ಸಭೆಯಲ್ಲಿ ಕೇಂದ್ರ ಸರಕಾರ ತೀರ್ಮಾನ ಕೈಗೊಳ್ಳುವ ನೀರೀಕ್ಷೆ ಇದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕನ್ನಡಕ್ಕೆ ಸ್ಥಾನ ಸಿಕ್ಕಿದರೆ ಅತಿ ಶ್ರೇಷ್ಠ ಅಧ್ಯಯನ ಕೇಂದ್ರವನ್ನು ಮೈಸೂರಿನ ಭಾರತೀಯ ಭಾಷಾ ಸಂಸ್ಥೆಯಲ್ಲಿ ಆರಂಭಿಸುವುದು ಉತ್ತಮ ಎಂದು ಅಭಿಪ್ರಾಯಪಟ್ಟರು.
|