ಗಣಿಗಾರಿಕೆಯನ್ನು ರಾಷ್ಟ್ರೀಕರಣಗೊಳಿಸುವ ಬಗ್ಗೆ ಹೈಕೋರ್ಟ್ ಶುಕ್ರವಾರ ನೀಡಿರುವ ತೀರ್ಪಿಗೆ ಬದ್ದವಾಗಿರುವುದಾಗಿ ತಿಳಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ತೀರ್ಪನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ನೀಡಿರುವ ಸೂಚನೆ ಕುರಿತು ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ನೈಸರ್ಗಿಕ ಸಂಪತ್ತು ಕಾಪಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಅವರು, ಈ ಬಗ್ಗೆ ಶೀಘ್ರವೇ ಸರ್ಕಾರ ಚಿಂತನೆ ನಡೆಸಲಿದೆ ಎಂದು ತಿಳಿಸಿದರು.
ಇದೇ ವೇಳೆ ಕನ್ನಡ ಶಾಸ್ತ್ರೀಯ ಸ್ಥಾನಮಾನದ ಕುರಿತು ತಮಿಳುನಾಡು ವಿರೋಧಿಸಿರುವ ಬಗ್ಗೆ ತೀಕ್ಷ್ಣಪ್ರತಿಕ್ರಿಯಿಸಿದ ಅವರು, ರಾಜ್ಯದ ಬಗ್ಗೆ ಅನಗತ್ಯವಾಗಿ ಆಕ್ಷೇಪ ಸಲ್ಲಿಸಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ಈ ಮಧ್ಯೆ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಅಧಿಕಾರದ ಗದ್ದುಗೆಯನ್ನು ಏರಿರುವ ಬಿಜೆಪಿ ಶತದಿನದತ್ತ ದಾಪುಗಾಲಿಡುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ತಿಂಗಳ ಒಂದರಿಂದ ಹಾಲು ಉತ್ಪಾದಕರಿಗೆ 2 ರೂಪಾಯಿ ಪ್ರೋತ್ಸಾಹಧನ ನೀಡುವ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
|