ಆಡಳಿತರೂಢ ಭಾರತೀಯ ಜನತಾ ಪಕ್ಷದ ಸರ್ಕಾರ ಪತನಗೊಂಡು, ರಾಜ್ಯದಲ್ಲಿ ಶೀಘ್ರವೇ ರಾಷ್ಟ್ರಪತಿ ಆಳ್ವಿಕೆ ಬರುವ ಸಾಧ್ಯತೆ ಇರುವುದಾಗಿ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಭವಿಷ್ಯ ನುಡಿದಿದ್ದಾರೆ.
ಗುಲ್ಬರ್ಗಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ದಿಯತ್ತ ಗಮನ ಹರಿಸುವುದನ್ನು ಬಿಟ್ಟು, ಆಪರೇಶನ್ ಕಮಲದಲ್ಲಿ ರಾಜಕೀಯ ಮಾಡ ಹೊರಟಿರುವ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೇ ಪಕ್ಷದಲ್ಲಿ ವಲಸಿಗರಿಗೆ ಮಣೆ ಹಾಕುವ ಮೂಲಕ, ಮನೆಯಾತನೇ ಹೊರಹೋಗಬೇಕಾದ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಬಿಜೆಪಿ ಶಾಸಕರಲ್ಲೇ ಬಂಡಾಯದ ಭುಗಿಲೆದ್ದಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
ಅದಕ್ಕೆ ಪೂರಕ ಎಂಬಂತೆ ಅಸಮಧಾನಗೊಂಡಿರುವ ಶಾಸಕ ರೇಣುಕಾಚಾರ್ಯ ಸೇರಿದಂತೆ ಎಂಟು ಅಧಿಕ ಮಂದಿ ಶಾಸಕರು ರಾಜೀನಾಮೆ ನೀಡಲು ಮುಂದಾಗಿರುವುದಾಗಿ ಬಲ್ಲ ಮೂಲಗಳು ತಿಳಿಸಿವೆ.
|