ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಗುಲ್ಬರ್ಗಾದಲ್ಲಿ ಸಚಿವ ಸಂಪುಟ ಸಭೆ ಆರಂಭ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗುಲ್ಬರ್ಗಾದಲ್ಲಿ ಸಚಿವ ಸಂಪುಟ ಸಭೆ ಆರಂಭ
ಹೈದರಾಬಾದ್- ಕರ್ನಾಟಕ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆಯಲಿರುವ ಬಹು ನಿರೀಕ್ಷಿತ ರಾಜ್ಯ ಸಚಿವ ಸಂಪುಟ ಶುಕ್ರವಾರ ಬೆಳಿಗ್ಗೆ ಆರಂಭಗೊಂಡಿದೆ.

ಅತಿ ಹಿಂದುಳಿದ ಪ್ರದೇಶ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಗುಲ್ಬರ್ಗಾದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆಯುತ್ತಿರುವ ಸಚಿವ ಸಂಪುಟದಲ್ಲಿ ಅನೇಕ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ನಿರೀಕ್ಷೆ ಇದೆ. ಸಭೆಗೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹೈದರಾಬಾದ್ -ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಅಲ್ಲದೆ, ಈ ಸಂದರ್ಭದಲ್ಲಿ ನಂಜುಂಡಪ್ಪ ವರದಿ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ ಮುಖ್ಯಮಂತ್ರಿಗಳು ಹೈ-ಕ ಶಾಪ ವಿಮೋಚನೆಗೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಿಳಿಸಿದರು.

ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಸಭೆ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.
ಮತ್ತಷ್ಟು
ಪಕ್ಷವನ್ನು ಬಲಪಡಿಸಿ ತೋರಿಸುವೆ:ದೇಶಪಾಂಡೆ
ಕೆಪಿಸಿಸಿ ಅಧ್ಯಕ್ಷಗಾದಿ ಆಕಾಂಕ್ಷಿಯಲ್ಲ:ಸಿದ್ದರಾಮಯ್ಯ
ಕೆಪಿಸಿಸಿಗೆ ಆರ್.ವಿ.ದೇಶಪಾಂಡೆ ಸಾರಥ್ಯ
ದಸರಾ ಪ್ರಚಾರ ಉಪಸಮಿತಿಗೆ ಸಿಎಂ ಚಾಲನೆ
ಆರ್ಚ್ ಬಿಷಪ್ ವಿರುದ್ಧ ಡೆರಿಕ್ ಕಿಡಿ
ಕೇಂದ್ರ-ರಾಜ್ಯದ ವಿರುದ್ಧ ಜೆಡಿಎಸ್ ಪ್ರತಿಭಟನೆ