ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಾಗೇರಿಯನ್ನು ಸಂಪುಟದಿಂದ ಕೈಬಿಡಲು ಆಗ್ರಹ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಗೇರಿಯನ್ನು ಸಂಪುಟದಿಂದ ಕೈಬಿಡಲು ಆಗ್ರಹ
ಶಿಕ್ಷಣ ಕ್ಷೇತ್ರದ ಸಮಸ್ಯೆ ಬಗ್ಗೆ ಚರ್ಚಿಸುವ ಸಲುವಾಗಿ ಸಭೆ ಕರೆಯಲು ಮೀನಾಮೇಷ ಎಣಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಧಾನಪರಿಷತ್ ಸದ್ಯಸ್ಯರು,ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿದ್ದಾರೆ.

ಪರಿಹಾರ ಬೋಧನೆ ಸೇರಿದಂತೆ ಶಿಕ್ಷಣ ಕ್ಷೇತ್ರದ ಹಲವಾರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಬಗ್ಗೆ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರದಿಂದ ಆಯ್ಕೆಯಾಗಿರುವ ಪ್ರತಿನಿಧಿಗಳ ಸಭೆ ಕರೆಯಲು ಹಿಂದೇಟು ಹಾಕುತ್ತಿರುವುದನ್ನು ವಿರೋಧಿಸಿದ್ದಾರೆ.

ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪರಿಷತ್ ಸದಸ್ಯರಾದ ಪುಟ್ಟಣ್ಣ,ನಾರಾಯಣಸ್ವಾಮಿ ಮತ್ತು ಮರಿತಿಬ್ಬೇಗೌಡ ಅವರು ಸಚಿವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಕಾಗೇರಿ ಆರ್‌ಎಸ್ಎಸ್ ಸಿಪಾಯಿ ಇದ್ದಂತೆ. ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಎರಡು ದಿನಗಳಲ್ಲಿ ಮುಖ್ಯಮಂತ್ರಿ ಅವರಿಗೆ ಪತ್ರ ಬರೆಯಲಾಗುವುದು ಎಂದು ಅವರು ಹೇಳಿದರು.

ಪರಿಹಾರ ಬೋಧನೆಗೆ ಸಂಬಂಧಿಸಿದಂತೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಈ ಬಗ್ಗೆ ಚರ್ಚಿಸಲು ಸಭೆ ಕರೆಯಲು ಕಳೆದ ಎರಡು ತಿಂಗಳಿನಿಂದಲೂ ವಿಧಾನಪರಿಷತ್‌ನ ಎಲ್ಲ ಸದಸ್ಯರು ಒತ್ತಡ ಹೇರಿದ್ದರೂ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರು ಆಪಾದಿಸಿದರು.
ಮತ್ತಷ್ಟು
ಬಾಂಬ್ 'ನಿಷ್ಪ್ರಯೋಜಕ' ವ್ಯವಸ್ಥೆ !
ಸಿದ್ದರಾಮಯ್ಯಗೆ ಪ್ರತಿಪಕ್ಷ ನಾಯಕ ಹುದ್ದೆ ?
ಕೋಮುವಾದದ ವಿರುದ್ಧ ಒಗ್ಗೂಡಬೇಕು: ದೇಶಪಾಂಡೆ
ನೂತನ ಜಿಲ್ಲೆಯಾಗಿ ಯಾದಗಿರಿ: ಸಿಎಂ ಘೋಷಣೆ
ಧಾರವಾಡದಲ್ಲಿ 5 ಸಜೀವ ಬಾಂಬ್ ಪತ್ತೆ
ಗುಲ್ಬರ್ಗಾದಲ್ಲಿ ಸಚಿವ ಸಂಪುಟ ಸಭೆ ಆರಂಭ