ಗುಲ್ಬರ್ಗಾ ಜಿಲ್ಲೆಯ ಯಾದಗಿರಿಯನ್ನು ನೂತನ ಜಿಲ್ಲೆಯನ್ನಾಗಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 30ನೇ ಜಿಲ್ಲೆಯಾಗಿ ಯಾದಗಿರಿಯನ್ನು ಆಯ್ಕೆ ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ತಿಳಿಸಿದ್ದಾರೆ.
ಹೊಸ ಜಿಲ್ಲೆ ಘೋಷಣೆ ಮಾಡುವ ಮೂಲಕ ಅಭಿವೃದ್ಧಿ ಕಾಣಬಹುದು ಎಂದು ಅವರು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ ಶಹಾಪುರವನ್ನು ಜಿಲ್ಲೆಯನ್ನಾಗಿ ಮಾಡಬೇಕೆಂದು ಆಗ್ರಹಿಸಿ ಬಂದ್ ಗೆ ಕರೆ ನೀಡಿರುವ ಗುಲ್ಬರ್ಗಾ ಜನತೆ ಬಂದ್ ಹಿಂತೆಗೆದುಕೊಳ್ಳಬೇಕೆಂದು ಅವರು ಆಗ್ರಹಿಸಿದರು.
ಈ ನಡುವೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಆಯ್ಕೆಯನ್ನು ಸಮರ್ಥಿಸಿಕೊಂಡ ಖರ್ಗೆ, ಕಾರ್ಯಾಧ್ಯಕ್ಷ ಹುದ್ದೆ ಬೇಕು ಅಥವಾ ಬೇಡ ಎಂಬ ಯಾವುದೇ ರೀತಿಯ ಅಭಿಪ್ರಾಯವನ್ನು ಹೈಕಮಾಂಡ್ ಗೆ ತಿಳಿಸಿರಲಿಲ್ಲ. ಯಾವುದೇ ಹುದ್ದೆ ನೀಡಿದರೂ ಒಗ್ಗಟ್ಟಿನಿಂದ ದುಡ್ಡಿಯುತ್ತೇವೆ. ಅಲ್ಲದೆ, ಕಾಂಗ್ರೆಸ್ ಪಕ್ಷದಲ್ಲಿ ಯಾರೊಬ್ಬರೂ ಪ್ರಭಾವಿಗಳಲ್ಲ. ಇಲ್ಲಿ ಪಕ್ಷವೇ ದೊಡ್ಡದು ಎಂದು ತಿಳಿಸಿದ್ದಾರೆ.
|