ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯೋತ್ಸವ ಪ್ರಶಸ್ತಿ: ಹೈಕೋರ್ಟ್‌ಗೆ ಅರ್ಜಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯೋತ್ಸವ ಪ್ರಶಸ್ತಿ: ಹೈಕೋರ್ಟ್‌ಗೆ ಅರ್ಜಿ
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟವಾದರೂ ಅಸಮಾಧಾನ ಭುಗಿಲೇಳುವ ಮೂಲಕ ವಿವಾದವೀಗ ಹೈಕೋರ್ಟ್ ಮೆಟ್ಟಿಲೇರಿದೆ.

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಅವೈಜ್ಞಾನಿಕವಾಗಿದ್ದು, ಪಟ್ಟಿಯನ್ನು ತಡೆಹಿಡಿಯುವಂತೆ ನ್ಯಾಯಾಲಯವನ್ನು ಕೋರಿದೆ.

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಕಾನೂನು ಕ್ಷೇತ್ರವನ್ನು ಕಡೆಗಣಿಸಿದೆ ಎಂದು ಆರೋಪಿಸಿರುವ ಕನ್ನಡ ರಕ್ಷಣಾ ವಕೀಲರ ವೇದಿಕೆ ಹೈಕೋರ್ಟ್‌‌ನಲ್ಲಿ ಅರ್ಜಿ ಸಲ್ಲಿಸಿದೆ.

ಕಳೆದ ವರ್ಷ ಖ್ಯಾತ ವಕೀಲ ಸಿ.ಎಚ್. ಹನುಮಂತರಾಯ ಸೇರಿದಂತೆ ಇಬ್ಬರು ಕಾನೂನು ಕ್ಷೇತ್ರದ ದಿಗ್ಗಜರಿಗೆ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿತ್ತು. ಆದರೆ ಈ ಬಾರಿ ಕಾನೂನು ಕ್ಷೇತ್ರದಿಂದ ಒಬ್ಬರನ್ನು ಪರಿಗಣಿಸದೆ ಕಾನೂನೂ ಕ್ಷೇತ್ರಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಅರ್ಜಿಯಲ್ಲಿ ದೂರಿದ್ದಾರೆ.

ಪ್ರಸ್ತುತ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಮಾಡಿರುವ ಆಯ್ಕೆ ದೋಷಪೂರಿತವಾಗಿದ್ದು, ಈ ಪಟ್ಟಿಯನ್ನು ತಡೆಹಿಡಿಯಬೇಕು ಹಾಗೂ ಪ್ರಶಸ್ತಿ ಪ್ರದಾನ ಮಾಡಲು ಅವಕಾಶ ನೀಡಬಾರದೆಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಶನಿವಾರ ನಡೆಯಲಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪಂಚಕೋಟಿ ಕನ್ನಡಿಗರ ಜಯ: ಸಿಎಂ
ವಿವಿ ವಿವಾದ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಹಂಪಿ ಉತ್ಸವಕ್ಕೆ ಮು.ಮ.ಚಂದ್ರುಗೆ ಆಹ್ವಾನವಿಲ್ಲ !
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಘೋಷಣೆ
ಶಾಸ್ತ್ರೀಯ ಸ್ಥಾನ-ರಾಜಕೀಯ ಬೇಡ: ಸದಾನಂದ ಗೌಡ
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಆಯ್ಕೆ