ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮಂಗಳೂರು: ಮಹೇಂದ್ರ ಕುಮಾರ್ ಬಿಡುಗಡೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮಂಗಳೂರು: ಮಹೇಂದ್ರ ಕುಮಾರ್ ಬಿಡುಗಡೆ
ಚರ್ಚ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಯಾಗಿದ್ದ ಬಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್‌‌ ಅವರನ್ನು ಶನಿವಾರ ಬೆಳಿಗ್ಗೆ ಮಂಗಳೂರು ಜೈಲ್‌ನಲ್ಲಿದ್ದ ಅವರನ್ನು ಬಿಡುಗಡೆಗೊಳಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಚರ್ಚ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಂದ್ರ ಕುಮಾರ್ ವಿರುದ್ಧ ನಾಲ್ಕಾರು ದೂರು ದಾಖಲಾಗಿದ್ದವು. ಇತ್ತೀಚೆಗಷ್ಟೇ ಹೈಕೋರ್ಟ್ ಜಾಮೀನು ನೀಡಿದ್ದರೂ ಕೂಡ, ಮಂಗಳೂರು ಜಿಲ್ಲಾ ನ್ಯಾಯಾಲಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಾಮೀನು ನಿರಾಕರಿಸಿತ್ತು.

ಇದೀಗ ಮಂಗಳೂರು ಜಿಲ್ಲಾ ನ್ಯಾಯಾಲಯ ಶುಕ್ರವಾರ ಮಹೇಂದ್ರ ಕುಮಾರ್‌ಗೆ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಂಗಳೂರು ಸಬ್ ಜೈಲಿನಿಂದ ಅವರನ್ನು ಬಿಡುಗಡೆಗೊಳಿಸಿದೆ.

ಪ್ರತಿಕ್ರಿಯೆ: ಜೈಲಿನಿಂದ ಬಿಡುಗಡೆಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ, ಭಯೋತ್ಪಾದನೆ ವಿರುದ್ಧದ ತಮ್ಮ ಸಮರ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ, ಇದು ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಸಂಭ್ರಮಾಚರಣೆ: ಮಹೇಂದ್ರ ಕುಮಾರ್ ಅವರು ಜೈಲಿನಿಂದ ಬಿಡುಗಡೆಗೊಳ್ಳುತ್ತಿದ್ದಂತೆಯೇ ಜೈಲಿನ ಹೊರಭಾಗದಲ್ಲಿ ನೆರೆದಿದ್ದ ಬಜರಂಗದಳದ ನೂರಾರು ಕಾರ್ಯಕರ್ತರು ಜೈಘೋಷ ಕೂಗುವ ಮೂಲಕ ಸಂತಸ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜ್ಯೋತ್ಸವ ಪ್ರಶಸ್ತಿ: ಹೈಕೋರ್ಟ್‌ಗೆ ಅರ್ಜಿ
ಪಂಚಕೋಟಿ ಕನ್ನಡಿಗರ ಜಯ: ಸಿಎಂ
ವಿವಿ ವಿವಾದ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಹಂಪಿ ಉತ್ಸವಕ್ಕೆ ಮು.ಮ.ಚಂದ್ರುಗೆ ಆಹ್ವಾನವಿಲ್ಲ !
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಘೋಷಣೆ
ಶಾಸ್ತ್ರೀಯ ಸ್ಥಾನ-ರಾಜಕೀಯ ಬೇಡ: ಸದಾನಂದ ಗೌಡ