ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯೋತ್ಸವ ಪ್ರಶಸ್ತಿ ಇಂದು ಪ್ರದಾನ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯೋತ್ಸವ ಪ್ರಶಸ್ತಿ ಇಂದು ಪ್ರದಾನ
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಕಲಾಭಿಮಾನಿಗಳು ಪ್ರಶಸ್ತಿ ಪ್ರದಾನ ಸಮಾರಂಭ ವೀಕ್ಷಿಸಲು ಅನುಕೂಲವಾಗುವಂತೆ ಪ್ರಥಮ ಬಾರಿಗೆ ಈ ವರ್ಷ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲಾಗುತ್ತಿದೆ.

ಸುಮಾರು 5 ಸಾವಿರ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರತ್ಯೇಕ ವೇದಿಕೆಗಳನ್ನು ಸಿದ್ಧಪಡಿಸಲಾಗಿದೆ. ಕಾರ್ಯಕ್ರಮವು ಶನಿವಾರ ಸಂಜೆ 5ರಿಂದ ಪ್ರಾರಂಭಗೊಳ್ಳಲಿದೆ.

ವಿದುಷಿ ಸಂಗೀತ ಕಟ್ಟಿ ಅವರ ನಿರ್ದೇಶನದಲ್ಲಿ 175 ಯುವ ಗಾಯಕರಿಂದ ಕನ್ನಡ ಗೀತೆಗಳ ಸಮೂಹ ಗಾಯನ ನಡೆಯಲಿದೆ. ಸಂಜೆ 6.30ರಿಂದ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಬಳಿಕ 8.30ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.

ಪೊಲೀಸ್ ಸರ್ಪಗಾವಲು:

ಇತ್ತೀಚೆಗೆ ಅಸ್ಸಾಂನಲ್ಲಿ ಸರಣಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಸಮಾರಂಭಕ್ಕೆ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಎಲ್ಲಾ ಕಡೆಗಳಲ್ಲಿಯೂ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ನಾಡಿನಾದ್ಯಂತ ರಾಜ್ಯೋತ್ಸವ ಸಂಭ್ರಮ
ಮತ್ತೆ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ
ಮಂಗಳೂರು: ಮಹೇಂದ್ರ ಕುಮಾರ್ ಬಿಡುಗಡೆ
ರಾಜ್ಯೋತ್ಸವ ಪ್ರಶಸ್ತಿ: ಹೈಕೋರ್ಟ್‌ಗೆ ಅರ್ಜಿ
ಪಂಚಕೋಟಿ ಕನ್ನಡಿಗರ ಜಯ: ಸಿಎಂ
ವಿವಿ ವಿವಾದ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್